ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬದವರಿಗೆ ಬಿಜೆಪಿ ಪಕ್ಷದ ವತಿಯಿಂದ ನಿರ್ಮಿಸುತ್ತಿದ್ದ ಮನೆಯ ಗೃಹ ಪ್ರವೇಶ ಏ.27ರಂದು ನಡೆಯಲಿದೆ.
ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮದ ನೆಟ್ಟಾರು ಎಂಬಲ್ಲಿ ಮನೆ ನಿರ್ಮಿಸಲಾಗಿದೆ. ಈ ಮನೆಗೆ ‘ಪ್ರವೀಣ್’ ಎಂದು ನಾಮಕರಣ ಮಾಡಲಾಗಿದೆ. 27ರಂದು ಬೆಳಿಗ್ಗೆ 8.40ಕ್ಕೆ ಗಣಪತಿ ಹೋಮ
ಮತ್ತು ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ಗೃಹ ಪ್ರವೇಶ ನಡೆಯಲಿದೆ. ದಿವಂಗತ ಪ್ರವೀಣ್ ನೆಟ್ಟಾರು ಅವರ ಕುಟುಂಬದವರು ನೀಡಿದ ನಕ್ಷೆಯ ಪ್ರಕಾರ ಕುಟುಂಬ ವಾಸವಿದ್ದ ಜಾಗದಲ್ಲೇ ಮನೆ ನಿರ್ಮಿಸಲಾಗಿದೆ.














