Coastal Bulletin

ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕಗಳ ನೇತೃತ್ವದಲ್ಲಿ ಐಕ್ಯತಾ ಸಮಾವೇಶ ಬಂಟ್ವಾಳದ ಸ್ಪರ್ಶಕಲಾ ಮಂದಿರದಲ್ಲಿ ಏ.9 ರಂದು ಬೆಳಗ್ಗೆ 10.30 ಕ್ಕೆ ನಡೆಯಲಿದೆ‌.

ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಚಂಡ್ತಿಮಾರ್  ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ  ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯ ಸಭಾ ಸದಸ್ಯ ಎಲ್ ಹನುಮಂತಯ್ಯ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮವನ್ನು ವಿಧಾನಪರಿಷತ್ತು ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಾಜಿ

ಸಚಿವ ಬಿ.ರಮಾನಾಥ ರೈ ವಹಿಸಲಿದ್ದಾರೆ ಎಂದರು.

ಭವಿಷ್ಯತ್ತಿನ ಬಂಟ್ವಾಳ ಕ್ಕೆ ಈ ಸಮಾವೇಶ ಏರ್ಪಡಿಸಲಶಗಿದ್ದು, ರಾಜ್ಯದ ಬಿಜೆಪಿ ಸರಕಾರದಿಂದ ಪರಿಶಿಷ್ಟ ಸಮುದಾಯದ ಜನಸಾಮಾನ್ಯರಿಗೆ, ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತಿದ್ದು, ಮೀಸಲಾತಿ ಎಂಬುದು ಪರಿಶಿಷ್ಟರ ಭಿಕ್ಷೆಯಲ್ಲ ಅದು ಹಕ್ಕು ಎಂಬ ನೆಲೆಯಲ್ಲಿ  ಈ ಸಮಾವೇಶ ಮಾಡುತ್ತಿದ್ದೇವೆ ಎಂದರು.

Leave a Comment