ಮಂಗಳೂರು: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ(79) ನಿಧನರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ವಸಂತ ಬಂಗೇರ (Vasanth Bangera) ಇಂದು ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಬೆಳ್ತಂಗಡಿಯಲ್ಲಿ ಐದು ಬಾರಿಯ ಶಾಸಕರಾಗಿದ್ದ ಕೆ.ವಸಂತ ಬಂಗೇರ ದೀರ್ಘ ಕಾಲದ ಆನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚೆಗೆ ಬಂಗೇರ ಆರೋಗ್ಯ
ತೀವ್ರವಾಗಿ ಹದಗೆಟ್ಟಿತ್ತು. ಬೆಂಗಳೂರಿನ ಆಸ್ಪತ್ರೆಯಲ್ಲಿ ಕಳೆದ ಹಲವು ತಿಂಗಳಿನಿಂದ ನಿರಂತರ ಚಿಕಿತ್ಸೆ ನಡೆಯುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಗುರುವಾರ ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸಲಿದ್ದು ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.









