ಬಂಟ್ವಾಳ;ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಅಮ್ಟಾಡಿ ಎಂಬಲ್ಲಿ ನಡೆದಿದೆ.
ಅಮ್ಟಾಡಿ ನಿವಾಸಿ ಲೋಕೇಶ್ ಅವರ ಪುತ್ರಿ 20 ವರ್ಷದ ಕವಿತಾ ಜ್ವರದಿಂದ ಮೃತಪಟ್ಟ ವಿದ್ಯಾರ್ಥಿನಿ.
ಕವಿತಾ ಸಿದ್ದಕಟ್ಟೆ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿನಿಯಾಗಿದ್ದು ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದಳು.ಇಂದು
ಜ್ವರ ಹೆಚ್ಚಾದ ಕಾರಣ ಮಂಗಳೂರಿನ ದೇರಳಕಟ್ಟೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕವಿತಾ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.















