ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಎದುರಾಗುವ ಭೀತಿ ಹಿನ್ನೆಲೆಯಲ್ಲಿ ಕೇರಳ ಮತ್ತು ಮಹಾರಾಷ್ಟ್ರ ಗಡಿಭಾಗದಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸುವಂತೆ ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಕಾಸರಗೋಡು ಗಡಿಗಳಲ್ಲಿ ಚೆಕ್ ಪೋಸ್ಟ್ ಹಾಕಲಾಗಿದೆ.
ಉಳ್ಳಾಲ ಮತ್ತು ಕೊಣಾಜೆ ಠಾಣೆ ವ್ಯಾಪ್ತಿಗೆ ಸೇರಿದ ತಲಪಾಡಿ, ನೆತ್ತಿಲಪದವು, ನಾರ್ಯ ಮುದುಂಗಾರುಕಟ್ಟೆ, ತೌಡುಗೋಳಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಹಾಕಿದ್ದು, ನಾಲ್ಕರಿಂದ 5
ಪೊಲೀಸರನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಒಳಭಾಗದ ಗಡಿಗಳಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದ್ದು, ಒಬ್ಬ ಎಸ್‌ಐ ಉಸ್ತುವಾರಿಯಲ್ಲಿ 24 ಗಂಟೆಯೂ ಪೊಲೀಸರ ನಿಯೋಜನೆ ಮಾಡಲಾಗಿದೆ.















