Coastal Bulletin

ದ. ಕ :ಮಂಗಳೂರು ವಿಮಾನ ನಿಲ್ದಾಣದಲ್ಲಿ ₹20 ಲಕ್ಷ ಮೌಲ್ಯದ ಅಕ್ರಮ ಚಿನ್ನವನ್ನು ಗುದನಾಳದಲ್ಲಿ ಇಟ್ಟುಕೊಂಡು ಸಾಗಾಟ ಮಾಡಿದ ವ್ಯಕ್ತಿಯನ್ನು ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕಾಸರಗೋಡಿನ ಪ್ರಯಾಣಿಕರೊಬ್ಬರು ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಮೂಲಕ ಮಂಗಳೂರು ವಿಮಾನ‌ ನಿಲ್ದಾಣಕ್ಕೆ ಬಂದಿಳಿದಿದ್ದು, ತಪಾಸಣೆ ವೇಳೆ ಈತ 430 ಗ್ರಾಂ ತೂಕದ ಚಿನ್ನದ ಪೌಡರ್ ಗುದನಾಳದಲ್ಲಿಟ್ಟು ಸಾಗಾಟ

ಮಾಡುತ್ತಿರುವುದು ಪತ್ತೆಯಾಗಿದೆ.ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆಯಲ್ಲಿ ಕಸ್ಟಮ್ಸ್‌ನ ಉಪ ಆಯುಕ್ತ ಪ್ರವೀಣ್ ಕಂಡಿ, ಅಧಿಕಾರಿಗಳಾದ ರಾಕೇಶ್‌ಕುಮಾರ್, ವಿಕಾಸ್‌ಕುಮಾರ್, ಬಿಕ್ರಮ್ ಚಕ್ರವರ್ತಿ ಭಾಗವಹಿಸಿದ್ದರು.

Leave a Comment