Coastal Bulletin

ಬೆಂಗಳೂರು : ಬೀದಿ ನಾಯಿಯನ್ನು ಗುಂಡು ಹಾರಿಸಿ ಕೊಲೆಗೈದಿರುವ ಘಟನೆ ಮಂಗಳೂರು ನಗರದ ಶಿವಬಾಗ್ ನಲ್ಲಿ ನಡೆದಿದ್ದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿಬಂದಿದೆ.

ನಗರದ ಶಿವಭಾಗ್ ಆಭರಣ ಜುವೆಲ್ಲರಿ ಬಳಿಯಲ್ಲಿ ನಾಯಿಯ ಶವ ಕಂಡುಬಂದಿದ್ದು ಸ್ಥಳೀಯರು ಗಮನಿಸಿ ಅನಿಮಲ್ ಕೇರ್ ಟ್ರಸ್ಟ್ ನವರಿಗೆ ಮಾಹಿತಿ ನೀಡಿದ್ದಾರೆ. ಮೇಲ್ನೋಟಕ್ಕೆ ಗುಂಡು ಹೊಡೆದು ಸಾಯಿಸಿದ ರೀತಿ ಕಂಡುಬಂದಿದ್ದರಿಂದ ಅನಿಮಲ್ ಕೇರ್ ಟ್ರಸ್ಟಿನ ಸುಮಾ ನಾಯಕ್ ಈ ಬಗ್ಗೆ ಕದ್ರಿ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಹಿನ್ನೆಲೆಯಲ್ಲಿ ಪೊಲೀಸರು ನಾಯಿಯನ್ನು ಪೋಸ್ಟ್ ಮಾರ್ಟಂ ನಡೆಸಲು ಸೂಚಿಸಿ ಪಶು ವೈದ್ಯರು ನಾಯಿಯನ್ನು ಪೋಸ್ಟ್ ಮಾರ್ಟಂ ನಡೆಸಿದ್ದು, ದೇಹದ ಒಳಹೊಕ್ಕಿದ್ದ ಗುಂಡನ್ನು ಹೊರತೆಗೆದಿದ್ದಾರೆ. 

ಏರ್ ಗನ್ ಬಳಸಿ ನಾಯಿಯನ್ನು ಕೊಂದಿರುವ ರೀತಿ ಕಂಡುಬಂದಿದೆ. ಬುಲೆಟ್

ಪೀಸ್ ದೇಹದಲ್ಲಿ ಒಳಗಿದ್ದುದನ್ನು ತೆಗೆದು ವಶಕ್ಕೆ ಪಡೆಯಲಾಗಿದೆ. ಕದ್ರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಸಿಸಿಟಿವಿ ಇದೆಯೇ ಎನ್ನುವ ಬಗ್ಗೆ ಪರಿಶೀಲನೆ ನಡೆಸಿ ತನಿಖೆ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಡಿಸಿಪಿ ಹರಿರಾಮ್ ಶಂಕರ್ ಹೇಳಿದ್ದಾರೆ.

ಇತ್ತೀಚೆಗೆ ನಾಯಿಯನ್ನು ಬೈಕಿಗೆ ಕಟ್ಟಿ ಎಳೆದುಕೊಂಡು ಹೋಗಿರುವುದು ಬಗ್ಗೆ ಪ್ರತ್ಯೇಕ ಎರಡು ಪ್ರಕರಣ ದಾಖಲಾಗಿತ್ತು.ಪ್ರಕರಣಗಳಲ್ಲಿ ಉತ್ತರ ಕರ್ನಾಟಕ ಮೂಲದ ನಾಲ್ವರನ್ನು ಬಂಧಿಸಲಾಗಿತ್ತು.

ಇದೀಗ ನಾಯಿಗೆ ಗುಂಡು ಹಾರಿಸಿ ಕೊಲೆ ಮಾಡಿ ಅಮಾನವೀಯವಾಗಿ ವರ್ತಿಸಿರುವ‌ ಘಟನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ದುರುಳರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Leave a Comment