ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್.21ರಿಂದ ಬೆಳಗ್ಗೆ 7 ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದ್ದು, ಈ ಆದೇಶ ಜುಲೈ 5ರ ಸಂಜೆಯವರೆಗೂ ವಿಸ್ತರಣೆಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದ್ದಾರೆ.
ಜಿಲ್ಲೆಯಾದ್ಯಂತ ಅನ್‌ಲಾಕ್ 1.0 ಭಾಗವಾಗಿ ಅಗತ್ಯವಸ್ತು ಖರೀದಿ ಅವಧಿ ವಿಸ್ತರಣೆ ಮಾಡಲಾಗಿದ್ದು ಆಹಾರ, ದಿನಸಿ, ಹಣ್ಣು-ತರಕಾರಿ, ಮೀನು-ಮಾಂಸ, ಬೀದಿಬದಿ ವ್ಯಾಪಾರ ಮತ್ತು ಮದ್ಯ ಪಾರ್ಸೆಲ್ಗಷ್ಟೇ ಮಧ್ಯಾಹ್ನ 1ರವರೆಗೆ ಅವಕಾಶ ನೀಡಲಾಗಿದೆ.
ಇನ್ನು ಜಿಲ್ಲೆಯಾದ್ಯಂತ ರಾತ್ರಿ 7ರಿಂದ ಬೆಳಗ್ಗೆ 7ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದ್ದು
ವಾರಾಂತ್ಯದ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆ. 7ರ ವರೆಗೆ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರಲಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಯಾವುದೇ ಬಸ್ ಸಂಚಾರಕ್ಕೂ ಅನುಮತಿ ನೀಡಲಾಗಿಲ್ಲ. ಆದರೆ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಇಬ್ಬರು ಪ್ರಯಾಣಿಕರ ಸಹಿತ ಸಂಚರಿಸಬಹುದು ಎಂದು ಆದೇಶಿಸಲಾಗಿದೆ.














