ಮಂಗಳೂರು: ಕಾಮುಕನೊಬ್ಬ ಅಪ್ರಾಪ್ತೆಗೆ ಮೊಬೈಲ್ ಗಿಫ್ಟ್ ನೀಡಿ ಆಕೆಯೊಂದಿಗೆ ಸ್ನೇಹ ಬೆಳೆಸಿ ನಂತರ ಆಕೆಯ ಮನೆಗೆ ತೆರಳಿ ನಿರಂತರ ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಆರೋಪಿ ವಿರುದ್ದ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಜೋಕಟ್ಟೆಯ ಅಬ್ದುಲ್ ರಫೂರ್ ಎಂಬಾತ ಆರೋಪಿ. ಈತ ಅಪ್ರಾಪ್ತೆಗೆ ಒಂದೂವರೆ ವರ್ಷದ ಹಿಂದೆ ಮೊಬೈಲ್ ತೆಗೆದುಕೊಟ್ಟಿದ್ದ.ಬಳಿಕ ಆಕೆಯೊಂದಿಗೆ ಮಾತನಾಡುತ್ತಾ ಸಲುಗೆ ಬೆಳೆಸಿಕೊಂಡಿದ್ದ.2020ರ ಅಕ್ಟೋಬರ್ ಮೊದಲ ವಾರದಿಂದ ಈತ ಬಾಲಕಿಯ ಮನೆಗೆ ರಾತ್ರಿ ಬರಲು ಆರಂಭಿಸಿದ್ದಾನೆ. ಪ್ರತಿದಿನ ರಾತ್ರಿ 1 ಗಂಟೆಗೆ
ಆಕೆಯ ಮನೆಯ ಕಾಂಪೌಂಡ್ ಗೋಡೆಯನ್ನು ಹಾರಿ ಬರುತ್ತಿದ್ದ ಈತ ಬಾಲ್ಕನಿಯ ಬಾಗಿಲನ್ನು ತೆಗೆಯುವಂತೆ ಒತ್ತಾಯಿಸುತ್ತಿದ್ದ. ಬಳಿಕ ಒಳಬಂದು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ತಪಾಸಣೆಗೆ ವೈದ್ಯರಲ್ಲಿಗೆ ಕರೆದೊಯ್ದಾಗ ಗರ್ಭಿಣಿ ಎಂದು ಗೊತ್ತಾಗಿದೆ.ಬಳಿಕ ಬಾಲಕಿಯನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮಹಿಳಾ ಠಾಣೆಯಲ್ಲಿ ಆರೋಪಿ ವಿರುದ್ದ ಪ್ರಕರಣ ದಾಖಲಾಗಿದೆ.















