Coastal Bulletin

ಮೈಸೂರು: ರಾಜ್ಯದ ನಾಲ್ವರು ಸಂಸದರು ಕೇಂದ್ರ ಸಚಿವರಾಗಬಹುದು ಎಂದು ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರು ಭವಿಷ್ಯ ನುಡಿದಿದ್ದಾರೆ.

ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ 2 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಸಚಿವ ಸಂಪುಟ ವಿಸ್ತರಣೆಯ ಕಸರತ್ತು  ನಡೆಯುತ್ತಿದೆ.ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ರಾಜ್ಯದ

ನಾಲ್ವರು ಸಂಸದರು ಸಚಿವರಾಗಬಹುದು. ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆಯಾದರೆ ಉತ್ತಮ.ನನ್ನ ಆರೋಗ್ಯ ಸರಿ ಇಲ್ಲದ ಕಾರಣ, ಸಚಿವ ಸ್ಥಾನ ಬೇಡ ಎಂದು ನಾನೇ ನಿರಾಕರಿಸಿದ್ದೇನೆ. ಆದರೆ ಉಳಿದವರು ಸಚಿವರಾಗಲಿ ಎಂದು ಹಾರೈಸಿದ್ದಾರೆ. 

Leave a Comment