ಧರ್ಮಸ್ಥಳ :ನೆರಿಯಾ ಗ್ರಾಮದ ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕೊರೊನಾ ಸೋಂಕಿತರಾದ 120 ಪುರುಷರು ಹಾಗೂ 86 ಮಹಿಳೆಯರು ಸೇರಿದಂತೆ ಒಟ್ಟು 206 ಮಂದಿ ಧರ್ಮಸ್ಥಳದಲ್ಲಿ ಕೊರೊನಾ ಆರೈಕೆ ಕೇಂದ್ರದಲ್ಲಿ ಶುಶ್ರೂಷೆ ಪಡೆದು ಸಂಪೂರ್ಣ ಗುಣಮುಖರಾಗಿ ನವಚೈತನ್ಯ ದೊಂದಿಗೆ ನಾಳೆ ಸೋಮವಾರ ಮರಳಿ ಸಿಯೋನ್ ಆಶ್ರಮಕ್ಕೆ ಮರಳುವರು.
ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳ ಸರ್ವಧರ್ಮ ಸಮನ್ವಯ ಕೇಂದ್ರವಾಗಿ ದೇಶ ವಿದೇಶಗಳಲ್ಲಿ ಖ್ಯಾತಿ ಪಡೆದಿದೆ. ಅನ್ನದಾನ, ವಿದ್ಯಾದಾನ, ಔಷಧದಾನ ಮತ್ತು ಅಭಯದಾನ ಇಲ್ಲಿ ನಿತ್ಯೋತ್ಸವ.ಕೊರೊನಾ ಸಂಕಷ್ಟದ ಸಂದರ್ಭದಲ್ಲಿಯೂ ಧರ್ಮಾಧಿಕಾರಿ ಡಿ. ವೀರೇಂದ್ರ
ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಅನೇಕ ಸೇವಾಕಾರ್ಯಗಳನ್ನು ಆಯೋಜಿಸಲಾಗಿದೆ. ರಾಜ್ಯದ ವಿವಿಧ ಊರುಗಳಲ್ಲಿ ಕೊರೊನಾ ಆರೈಕೆ ಕೇಂದ್ರ, ಸೋಂಕಿತರು ಆಸ್ಪತ್ರೆಗೆ ಹೋಗಲು ಮತ್ತು ಮನೆಗೆ ಬರಲು ಉಚಿತ ವಾಹನ ಸೌಲಭ್ಯ, ಆಸ್ಪತ್ರೆಗಳಿಗೆ ಆಮ್ಲಜನಕ ಸಾಂದ್ರಕಗಳ ಕೊಡುಗೆ ಇತ್ಯಾದಿ ಸೇವೆಗಳನ್ನು ಒದಗಿಸಲಾಗಿದೆ.














