Coastal Bulletin

ಬೆಂಗಳೂರು : ಐಎಂಎ ಸಂಸ್ಥೆಯಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರೋಷನ್ ಬೇಗ್ ಆಸ್ತಿ ಜಪ್ತಿ ಮಾಡಿದೆ. ರೋಷನ್ ಬೇಗ್​ಗೆ ಸೇರಿದ ಸ್ಥಿರಾಸ್ತಿ, ಬ್ಯಾಂಕ್ ಅಕೌಂಟ್ ಜಪ್ತಿ ಮಾಡಲಾಗಿದೆ ಎಂದು ರಾಜ್ಯ ಸರ್ಕಾರದ ಕಡೆಯಿಂದ ಹೈಕೋರ್ಟ್​ಗೆ ಮಾಹಿತಿ ನೀಡಲಾಗಿದೆ.

ಇನ್ನು ಐಎಂಎಯಿಂದ ಸರ್ಕಾರಿ ಶಾಲೆಗೆ 10 ಕೋಟಿ ದೇಣಿಗೆ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ತರಾಟೆ ತೆಗೆದುಕೊಂಡಿದೆ. ದೇಣಿಗೆ ನೀಡಿರುವುದರಿಂದ ಹಿಂದಿರುಗಿಸಲು ಸಾಧ್ಯವಿಲ್ಲ ಎಂದು ಸರ್ಕಾರಿ ವಕೀಲ ವಿಜಯ್ ಕುಮಾರ್ ಪಾಟೀಲ್ ವಾದ ಮಂಡಿಸಿದರು.

ಈ ವೇಳೆ ಶಾಸಕರ ಆಸ್ತಿ ಜಪ್ತಿ ಮಾಡಲು ವಿಳಂಬ ಮಾಡಿದ್ದೀರಿ? ಅರ್ಧ ಡಜನ್ ಆದೇಶ ನೀಡಿದ ನಂತರ ಜಪ್ತಿ ಮಾಡಿದ್ದೀರಾ.. ಈಗ ಸರ್ಕಾರಿ ಶಾಲೆಗೆ ನೀಡಿದ ದೇಣಿಗೆ ಹಿಂತಿರುಗಿಸಿಲ್ಲ ಅಂತೀರಾ.? ಠೇವಣಿದಾರರ ಹಣ ದೇಣಿಗೆ ಪಡೆದಿರುವುದು ಸರಿಯೇ.? ಐಎಂಎ ಬಗ್ಗೆ ಮೃದು ಧೋರಣೆ ತಳೆದಿದ್ದೀರಿ.? ಸರ್ಕಾರ ಸಕ್ಷಮ ಪ್ರಾಧಿಕಾರದೊಂದಿಗೆ ಸಹಕರಿಸುತ್ತಿಲ್ಲ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು ದೇಣಿಗೆ ಹಿಂತಿರುಗಿಸುವ ಬಗ್ಗೆ ನಿಲುವು ತಿಳಿಸಲು ಸೂಚನೆ ನೀಡಿ

ವಿಚಾರಣೆಯನ್ನ ಜುಲೈ 19 ಕ್ಕೆ ಮುಂದೂಡಿದೆ

ಐಎಂಎ ಸಂಸ್ಥಾಪಕ ಹಾಗೂ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಅಲಿಖಾನ್ ನಿಂದ ರೋಷನ್ ಬೇಗ್ ಅಕ್ರಮವಾಗಿ ಹಣ ಪಡೆದಿದ್ದಾರೆ ಎಂಬ ಆರೋಪದಡಿ ಕಳೆದ ನವೆಂಬರ್ 22 ರಂದು ರೋಷನ್ ಬೇಗ್ ಅವರನ್ನು ಸಿಬಿಐ ಬಂಧಿಸಿತ್ತು. ಆ ನಂತರ ಜಾಮೀನು ಪಡೆದು ಹೊರಗೆ ಬಂದಿದ್ದರು.

ಐಎಂಎ ಬಹುಕೋಟಿ ವಂಚನೆ ಪ್ರಕರಣ ರಾಜ್ಯದಲ್ಲಿ ದೊಡ್ಡ ಸುದ್ದಿ ಮಾಡಿತ್ತು.ರಾಜಕಾರಣಿಗಳ ಜತೆ ನಿಕಟ ಸಂಪರ್ಕ ಇಟ್ಟುಕೊಂಡಿದ್ದ ಮನ್ಸೂರ್ ಕೋಟ್ಯಂತರ ರೂ. ವಂಚನೆ ಮಾಡಿದ್ದು ಜೈಲಿನಲ್ಲಿದ್ದಾರೆ.ಈ ಪ್ರಕರಣದಲ್ಲಿ 36ನೇ ಆರೋಪಿಯಾಗಿರುವ ರೋಷನ್ ಬೇಗ್ ಸೇರಿದ ಸ್ಥಿರಾಸ್ತಿ, ಬ್ಯಾಂಕ್ ಅಕೌಂಟ್ ಜಪ್ತಿ ಮಾಡಲಾಗಿದ್ದು ಎಷ್ಟು ಪ್ರಮಾಣದ ಆಸ್ತಿಯನ್ನು ಸರ್ಕಾರ ಜಪ್ತಿ ಮಾಡಿದೆ ಎನ್ನುವುದು ಇನ್ನಷ್ಟೇ ತಿಳಿಯಬೇಕಿದೆ.

Leave a Comment