ಬೆಂಗಳೂರು : ಡಿಸೆಂಬರ್ ಒಳಗಾಗಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಸರಕಾರ ಲಸಿಕೆ ನೀಡಿಯೇ ನೀಡುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಜಗತ್ತಿನ ಇತರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಲಸಿಕೆಯ ಸಂಶೋಧನೆ, ತಯಾರಿಕೆ ಮತ್ತು ಲಸಿಕೀಕರಣ ಅತ್ಯಂತ ವೇಗವಾಗಿ ನಡೆಯುತ್ತಿದೆ.ಪ್ರತಿಯೊಬ್ಬರೂ ಲಸಿಕೆಯನ್ನು ತಪ್ಪದೇ ಪಡೆಯಬೇಕು. ಜತೆಗೆ, ಕುಟುಂಬದವರಿಗೂ ಕೊಡಿಸಬೇಕು ಹಾಗೂ ನಮ್ಮ ಸುತ್ತಮುತ್ತಲಿನ ಜನರು ಪಡೆಯುವಂತೆ ಪ್ರೋತ್ಸಾಹ ನೀಡಬೇಕು ಎಂದು ಡಿಸಿಎಂ ಹೇಳಿದರು.
ಕೊರೋನಾ ಬರದಂತೆ
ತಡೆಯುವ ಇರುವ ಏಕೈಕ ಪರಿಹಾರ ಲಸಿಕೆ ಮಾತ್ರ. ವ್ಯಾಕ್ಸಿನ್ ಬಗ್ಗೆ ನಡೆಯುತ್ತಿರುವ ರಾಜಕೀಯ ಅಷ್ಟಿಷ್ಟಲ್ಲ. ಜಾಗತಿಕವಾಗಿ ನಡೆದ ಷಡ್ಯಂತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಪರಿಣಾಮಕಾರಿಯಾಗಿ ಎದುರಿಸಿದ್ದಾರೆ. ಅದೇ ರೀತಿ ನಮ್ಮ ರಾಜ್ಯದಲ್ಲಿ ಸೃಷ್ಟಿಯಾಗಿರುವ ರಾಜಕೀಯ ತಂತ್ರಗಳಿಗೆ ರಾಜ್ಯ ಸರಕಾರ ತಿರುಗೇಟು ಕೊಟ್ಟಿದೆ ಎಂದರು.














