Coastal Bulletin

ಬೆಂಗಳೂರು :ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ 2020-21ನೇ ಸಾಲಿನ ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ ಫಲಿತಾಂಶ ಪ್ರಕಟಿಸಬಾರದು ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಈ ಬಗ್ಗೆ ಮಧ್ಯಂತರ ಆದೇಶ ಹೊರಡಿಸಿದೆ.

5.92 ಲಕ್ಷ ಪಿಯು ವಿದ್ಯಾರ್ಥಿಗಳ ಫಲಿತಾಂಶ ಬರಬೇಕಾಗಿದೆ. 76 ಸಾವಿರ ರಿಪೀಟರ್ಸ್ ಫಲಿತಾಂಶಕ್ಕೆ ಕಾಯುತ್ತಿರುವವರಾಗಿದ್ದಾರೆ. ಈ ಬಗ್ಗೆ ಸರ್ಕಾರ ಸರಿಯಾದ ತೀರ್ಮಾನ ಕೈಗೊಳ್ಳುವವರೆಗೆ ಫಲಿತಾಂಶ ಪ್ರಕಟ ಮಾಡಬಾರದು‌.15 ದಿನಗಳೊಳಗೆ ತಜ್ಞರ ಸಮಿತಿ ವರದಿ ನೀಡಬೇಕು.ರಿಪೀಟರ್ಸ್, ಸಾಮಾನ್ಯ ವಿದ್ಯಾರ್ಥಿಗಳಿಗೆ ತಾರತಮ್ಯ ಮಾಡಬಾರದು ಎಂದು ನ್ಯಾ.ಬಿ.ವಿ.ನಾಗರತ್ನ ನೇತೃತ್ವದ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.12 ತಜ್ಞರ ಸಮಿತಿ ರಚಿಸಿರುವುದಾಗಿ ಸರ್ಕಾರ ಹೇಳಿಕೆ ನೀಡಿತ್ತು. ಹೀಗಾಗಿ, ಈಗಲೇ

ಫಲಿತಾಂಶ ಪ್ರಕಟ ಮಾಡಬಾರದು ಎಂದು ಕೋರ್ಟ್ ಹೇಳಿದೆ..ತಜ್ಞರ ಸಮಿತಿ ಸಲಹೆ ಆಧರಿಸಿ ಸರ್ಕಾರ ತೀರ್ಮಾನಿಸಲಿದೆ.

ಕರ್ನಾಟಕ ಹೈಕೋರ್ಟ್ ಇಂದು ದ್ವಿತೀಯ ಪಿಯುಸಿ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕೆಲ ವಿದ್ಯಾರ್ಥಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಇಂದು ವಿಚಾರಣೆ ಮಾಡಿ ಕೇವಲ ಫ್ರೆಶರ್‌ಗಳನ್ನು ಮಾತ್ರ ಪಾಸ್ ಮಾಡಿ, ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತಿರುವ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ.

Leave a Comment