Coastal Bulletin

ಮಂಗಳೂರು : ರಾಜ್ಯದಲ್ಲಿ ಮಳೆರಾಯನ ಅಬ್ಬರ ಜೋರಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ.ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸೂಚನೆಯಿದ್ದು, ಹವಾಮಾನ ಇಲಾಖೆ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಕಳೆದ ಮೂರು ದಿನಗಳಿಂದಲೂ ನಿರಂತರವಾಗಿ ಮಳೆಯಾಗುತ್ತಿದ್ದು, ನದಿ ತೊರೆಗಳು ಉಕ್ಕಿ ಹರಿಯುತ್ತಿವೆ. , ಈಗ ಮುಂಗಾರು ಅಬ್ಬರ ಹೆಚ್ಚಾಗಿದೆ. 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆ ಮಲೆನಾಡು

ಪ್ರದೇಶಗಳಲ್ಲಿ ಅಧಿಕ ಮಳೆಯಾಗುವ ಸೂಚನೆ ನೀಡಿದ್ದು ಈ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕಳೆದ ಮೂರು ದಿನಗಳಿಂದಲೂ ಧಾರಾಕಾರ ಮಳೆ ಸುರಿಯುತ್ತಿದೆ.

Leave a Comment