ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ನಾನು ಸೇರಲ್ಲ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ.
ನಾನು ಮಾಜಿ ಮುಖ್ಯಮಂತ್ರಿ ಮತ್ತು ಪಕ್ಷದ ಹಿರಿಯ ನಾಯಕನಾದ ಕಾರಣ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಪಕ್ಷದ ವರಿಷ್ಠರು ಜವಾಬ್ದಾರಿ ನೀಡಿದರೆ ನಿರ್ವಹಿಸುತ್ತೇನೆ. ನಳಿನ್ ಕುಮಾರ್ ಕಟೀಲ್ ಆಡಿಯೋ ಗೂ ನನ್ನ ವೈಯಕ್ತಿಕ ನಿರ್ಧಾರ ಸಂಬಂದ ಇಲ್ಲ ಎಂದು ಶೆಟ್ಟರ್ ಹೇಳಿದ್ದಾರೆ.
ನನ್ನ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪನವರ ಗಮನಕ್ಕೆ ತಂದಿದ್ದೇನೆ,ನೈತಿಕ ಕಾರಣದಿಂದ ನಾನು ಸಂಪುಟಕ್ಕೆ ಸೇರುವುದಿಲ್ಲ
ಎಂದು ತಿಳಿಸಿದ್ದು, ಈ ಹಿಂದೆ ನಾನು ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡಿದ್ದೇನೆ. ಈಗಲೂ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ಜಗದೀಶ್ ಶೆಟ್ಟರ್ 2004 ರಲ್ಲಿ ಜನತಾದಳದಿಂದ ಸ್ಪರ್ಧಿಸಿದ್ದ ಬಸವರಾಜ ಬೊಮ್ಮಾಯಿ ಅವರನ್ನು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸೋಲಿಸಿದ್ದರು.2008 ರಲ್ಲಿ ಬಸವರಾಜ ಬೊಮ್ಮಾಯಿ ಬಿಜೆಪಿ ಸೇರಿದಾಗ, ಜಗದೀಶ್ ಶೆಟ್ಟರ್ ಅನಂತ್ ಕುಮಾರ್ ಬಣದಲ್ಲಿ ಇದ್ದರು. ಆಗ ಬೊಮ್ಮಾಯಿ,ಶೆಟ್ಟರ್ ವಿರೋಧಿ ಕ್ಯಾಂಪ್ ನಲ್ಲಿ ಗುರುತಿಸಿಕೊಂಡು ಬಿಎಸ್ವೈಗೆ ಹತ್ತಿರವಾದರು.















