Coastal Bulletin

ದೆಹಲಿ: ಕೊರೊನಾ ಎರಡನೇ ಅಲೆ ಉಪಟಳದಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿರುವ ಐಪಿಲ್​ 2021ಆವೃತ್ತಿಯನ್ನು ದುಬೈನಲ್ಲಿ ಮುಂದುವರೆಸಲು ಬಿಸಿಸಿಐ ನಿರ್ಧರಿಸಿದೆ. ಸೆಪ್ಟೆಂಬರ್ 18 ಅಥವಾ 19ರಿಂದ ಐಪಿಎಲ್ 14 ಪುನಾರಂಭಗೊಳ್ಳಲಿದ್ದು ಮೂರು ವಾರಗಳ ಕಾಲ ನಡೆಯಲಿರುವ ಆವೃತ್ತಿಯ ದ್ವಿತೀಯಾರ್ಧದಲ್ಲಿ 10 ಮುಖಾಮುಖಿ ಪಂದ್ಯಗಳನ್ನು ಆಯೋಜಿಸಲು ಚಿಂತಿಸಲಾಗಿದೆ ಎಂದು ಬಿಸಿಸಿಐ ಉನ್ನತ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಆ ಮೂಲಕ ಅರ್ಧದಲ್ಲೇ ನಿಂತು ಕ್ರಿಕೆಟ್ ಪ್ರೇಮಿಗಳಿಗೆ ಉಂಟಾಗಿದ್ದ ನಿರಾಸೆಯನ್ನು ಶಮನ ಮಾಡಲು ಬಿಸಿಸಿಐ ಚಿಂತಿಸುತ್ತಿರುವುದು ದೃಢಪಟ್ಟಿದೆ. ಈ ಸರಣಿಯ ಫೈನಲ್ ಪಂದ್ಯವನ್ನು ಅಕ್ಟೋಬರ್ 9 ಅಥವಾ 10ರಂದು ಆಡಿಸಲು ಬಿಸಿಸಿಐ ನಿರ್ಧರಿಸಿದೆ ಎಂಬುದು ಕೂಡಾ ಇದೇ ಸಂದರ್ಭದಲ್ಲಿ ಬಹಿರಂಗವಾಗಿದೆ. ಈ ಬಗ್ಗೆ ಬಿಸಿಸಿಐ ಈಗಾಗಲೇ ಎಲ್ಲಾ ಫ್ರಾಂಚೈಸಿಗಳೊಂದಿಗೆ ನಿರ್ಧರಿಸಿದ್ದು ಬಾಕಿ ಉಳಿದಿರುವ ಪಂದ್ಯಾವಳಿಗಳನ್ನು ಸೆಪ್ಟೆಂಬರ್ 18-20ರ ಆಸುಪಾಸಿನಲ್ಲಿ ಆರಂಭಿಸುವುದಾಗಿ ಮಾಹಿತಿ ರವಾನಿಸಿದೆ.

ದೆಹಲಿ: ಕೊರೊನಾ ಎರಡನೇ ಅಲೆ ಉಪಟಳದಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿರುವ ಐಪಿಲ್​ 2021ಆವೃತ್ತಿಯನ್ನು ದುಬೈನಲ್ಲಿ ಮುಂದುವರೆಸಲು ಬಿಸಿಸಿಐ ನಿರ್ಧರಿಸಿದೆ. ಸೆಪ್ಟೆಂಬರ್ 18 ಅಥವಾ 19ರಿಂದ ಐಪಿಎಲ್ 14 ಪುನಾರಂಭಗೊಳ್ಳಲಿದ್ದು ಮೂರು ವಾರಗಳ ಕಾಲ ನಡೆಯಲಿರುವ ಆವೃತ್ತಿಯ ದ್ವಿತೀಯಾರ್ಧದಲ್ಲಿ 10 ಮುಖಾಮುಖಿ ಪಂದ್ಯಗಳನ್ನು ಆಯೋಜಿಸಲು ಚಿಂತಿಸಲಾಗಿದೆ ಎಂದು ಬಿಸಿಸಿಐ ಉನ್ನತ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಆ ಮೂಲಕ ಅರ್ಧದಲ್ಲೇ ನಿಂತು

ಕ್ರಿಕೆಟ್ ಪ್ರೇಮಿಗಳಿಗೆ ಉಂಟಾಗಿದ್ದ ನಿರಾಸೆಯನ್ನು ಶಮನ ಮಾಡಲು ಬಿಸಿಸಿಐ ಚಿಂತಿಸುತ್ತಿರುವುದು ದೃಢಪಟ್ಟಿದೆ. ಈ ಸರಣಿಯ ಫೈನಲ್ ಪಂದ್ಯವನ್ನು ಅಕ್ಟೋಬರ್ 9 ಅಥವಾ 10ರಂದು ಆಡಿಸಲು ಬಿಸಿಸಿಐ ನಿರ್ಧರಿಸಿದೆ ಎಂಬುದು ಕೂಡಾ ಇದೇ ಸಂದರ್ಭದಲ್ಲಿ ಬಹಿರಂಗವಾಗಿದೆ. ಈ ಬಗ್ಗೆ ಬಿಸಿಸಿಐ ಈಗಾಗಲೇ ಎಲ್ಲಾ ಫ್ರಾಂಚೈಸಿಗಳೊಂದಿಗೆ ನಿರ್ಧರಿಸಿದ್ದು ಬಾಕಿ ಉಳಿದಿರುವ ಪಂದ್ಯಾವಳಿಗಳನ್ನು ಸೆಪ್ಟೆಂಬರ್ 18-20ರ ಆಸುಪಾಸಿನಲ್ಲಿ ಆರಂಭಿಸುವುದಾಗಿ ಮಾಹಿತಿ ರವಾನಿಸಿದೆ.

Leave a Comment