Coastal Bulletin

ತುರ್ತು ಚಿಕಿತ್ಸೆಗಾಗಿ ರೋಗಿಯೊಬ್ಬರನ್ನು ಆಂಬ್ಯುಲೆನ್ಸ್ ನಲ್ಲಿ ಸಾಗಿಸುತ್ತಿದ್ದಾಗ ಕಾರು ಚಾಲಕನೊಬ್ಬ ಆಂಬ್ಯುಲೆನ್ಸ್ ಗೆ ದಾರಿ ಬಿಡದೆ ಸತಾಯಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಕಾರು ಸಮೇತ ಆರೋಪಿಯನ್ನು ಬಂಧಿಸಿದ್ದಾರೆ.ಉಳ್ಳಾಲ ಸಮೀಪದ ಕೋಟೆಕಾರು ನಿವಾಸಿ ಚರಣ್ ರಾಜ್(28)ಬಂಧಿತ.

ಸೋಮವಾರ ಸಂಜೆ ರೋಗಿಯೊಬ್ಬರನ್ನು ಕಣಚೂರು ಆಸ್ಪತ್ರೆಯಿಂದ ಮಂಗಳೂರಿನ ಆಸ್ಪತ್ರೆಯೊಂದಕ್ಕೆ ಆಂಬ್ಯುಲೆನ್ಸ್ ನಲ್ಲಿ ಸಾಗಿಸಲಾಗುತ್ತಿತ್ತು. ದಾರಿ ಮದ್ಯೆ ಕಾರು ಚಾಲಕ ಚರಣ್ ರಾಜ್ ಆಂಬ್ಯುಲೆನ್ಸ್ ಗೆ ದಾರಿ ಬಿಡದೆ ಅಡ್ಡಿಪಡಿಸಿದ್ದ. ಕಾರು ಚಾಲಕ

ಅಮಾನವೀಯವಾಗಿ ವರ್ತಿಸಿದ ಕುರಿತ ವೀಡಿಯೋ ವೈರಲ್ ಆಗಿದ್ದು, ಆರೋಪಿಯ ವಿರುದ್ಧ ನಾಗುರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಯನ್ನು ಮಂಗಳವಾರ ಬಂಧಿಸಿದ್ದಾರೆ.

Leave a Comment