ಇಸ್ಲಾಮಾಬಾದ್ : ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ವಿರುದ್ಧ ರಾಷ್ಟ್ರದ ಸಂಸತ್ತಿನಲ್ಲಿ ಇಂದು ನಡೆಯಬೇಕಿದ್ದ ಅವಿಶ್ವಾಸ ನಿರ್ಣಯ ಮಂಡನೆಗೆ ಸ್ಪೀಕರ್ ನಿರಾಕರಿಸಿದ್ದಾರೆ ಇದರಿಂದ ಇಮ್ರಾನ್ ಖಾನ್ ಸದ್ಯಕ್ಕೆ ಪಾಕ್ ಪ್ರಧಾನಿಯಾಗಿ ಉಳಿಯಲಿದ್ದಾರೆ.
ಪಾಕಿಸ್ತಾನದ ಸಂಸತ್ತಿನಲ್ಲಿ 342 ಸದಸ್ಯ ಬಲದ ಪೈಕಿ ಬಹುಮತಕ್ಕೆ 172 ಸದಸ್ಯರು ಬೆಂಬಲ ಬೇಕಾಗುತ್ತದೆ. ಈ ನಿರ್ಣಯವನ್ನು 172 ಸದಸ್ಯರು ಒಟ್ಟುಗೂಡಿ ಸರ್ಕಾರವನ್ನು ಉರುಳಿಸಲಿದ್ದಾರೆ
ಎಂದು ಪ್ರತಿಪಕ್ಷಗಳು ವಿಶ್ವಾಸ ವ್ಯಕ್ತಪಡಿಸಿತ್ತು.
ಪಾಕ್ ಅಧ್ಯಕ್ಷರಿಂದ ಅಸೆಂಬ್ಲಿ ವಿಸರ್ಜನೆ ಮಾಡಿ ಮುಂದಿನ 3 ತಿಂಗಳುಗಳಲ್ಲಿ ಚುನಾವಣೆ ನಡೆಸುವಂತೆ ಆದೇಶ ನೀಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.














