Coastal Bulletin

ಕೊಲಂಬೊ : ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಜನರ ತೀವ್ರ ಆಕ್ರೋಶಕ್ಕೆ ಮಣಿದು ಇಂದು ರಾಜೀನಾಮೆ ನೀಡಿದ್ದಾರೆ.ಇದರ ಬೆನ್ನಲ್ಲೇ ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಅತ್ತು ಕೋರಲ ಅವರು ತಮ್ಮ ಕಾರಲ್ಲಿ ಬರುತ್ತಿದ್ದ ವೇಳೆ ಇಬ್ಬರು ವ್ಯಕ್ತಿಗಳು ಏಕಾಏಕೀ ಗುಂಡು ಹಾರಿಸಿ ಹತ್ಯೆ ಗೈದಿದ್ದಾರೆ.

ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಜನರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಆದರೂ ರಾಜಪಕ್ಸೆ ಸಹೋದರರಾದ ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಮತ್ತು ಪ್ರಧಾನಿ ಮಹಿಂದಾ ರಾಜಪಕ್ಸೆ

ತಮ್ಮ ರಾಜೀನಾಮೆಯ ಕರೆಗಳನ್ನು ಇಲ್ಲಿಯವರೆಗೆ ಧಿಕ್ಕರಿಸಿದ್ದರು. ಆದರೀಗ ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ. ಇದರ ಬೆನ್ನಲ್ಲೆ ರಾಷ್ಟ್ರವ್ಯಾಪಿ ಕರ್ಫ್ಯೂ ಜಾರಿಗೊಳಿಸಲಾಗಿದೆ.

Leave a Comment