Coastal Bulletin

ದುಬೈ : ಗಂಭೀರ ಅನಾರೋಗ್ಯದ ಕಾರಣದಿಂದಾಗಿ ಸಾಕಷ್ಟು ವರ್ಷಗಳಿಂದ ದುಬೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಇಂದು ನಿಧನರಾಗಿದ್ದಾರೆ.

ಪರ್ವೇಜ್ ಮುಷರಫ್ 1999ರಲ್ಲಿ ಫೆಡರಲ್ ಮಿಲಿಟರಿ ಸ್ವಾಧೀನದ ಬಳಿಕ ಪಾಕಿಸ್ತಾನದ 10ನೇ ಅಧ್ಯಕ್ಷರಾಗಿದ್ದರು. 2001 ರಿಂದ 2008ರ ವರೆಗೆ ಪಾಕಿಸ್ತಾನದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ,

ಬಳಿಕ ತಮ್ಮ ಮೇಲಿನ ದೋಷಾರೋಪಣೆಗಳನ್ನು ತಪ್ಪಿಸಲು ರಾಜೀನಾಮೆ ನೀಡಿದ್ದರು.

ಮುಷರಫ್ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿ ವೆಂಟಿಲೇಟರ್‌ನಲ್ಲಿದ್ದರು. ಮುಷರಫ್ ಇದೀಗ ತಮ್ಮ 78ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

Leave a Comment