ದುಬೈ : ಯುಎಇ ಅಧ್ಯಕ್ಷ ಮತ್ತು ಅಬುಧಾಬಿಯ ಆಡಳಿತಗಾರ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಶುಕ್ರವಾರ, ಮೇ 13 ರಂದು ನಿಧನರಾದರು ಎಂದು ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯ ಪ್ರಕಟಿಸಿದೆ.
ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಯುಎಇ ಅಧ್ಯಕ್ಷರಾಗಿ ಮತ್ತು ಅಬುಧಾಬಿಯ ಆಡಳಿತಗಾರರಾಗಿ 2004ರ ನವೆಂಬರ್ 3ರಿಂದ ಸೇವೆ ಸಲ್ಲಿಸಿದ್ದರು. ಅವರು ತಮ್ಮ ತಂದೆಯ ಉತ್ತರಾಧಿಕಾರಿಯಾಗಿ
ಆಯ್ಕೆಯಾಗಿದ್ದರು. ದಿವಂಗತ ಶೇಖ್ ಜಾಯೆದ್ ಬಿನ್ ಸುಲ್ತಾನ್ ಅಲ್ ನಹ್ಯಾನ್, ಅವರು 1971 ರಲ್ಲಿ ಒಕ್ಕೂಟದಿಂದ ಯುಎಇಯ ಮೊದಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, 2004ರ ನವೆಂಬರ್ 2 ರಂದು ನಿಧನರಾಗಿದ್ದರು.














