Coastal Bulletin

ಕೊಲಂಬೊ : ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಆಯ್ಕೆಯಾಗಿದ್ದಾರೆ.

ಬುಧವಾರ ಶ್ರೀಲಂಕಾ ಸಂಸತ್ತಿನಲ್ಲಿ ನಡೆದ ಚುನಾವಣೆಯಲ್ಲಿ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ.

73 ವರ್ಷದ ಮತ್ತು ಆರು ಬಾರಿ ಪ್ರಧಾನಿಯಾಗಿದ್ದ ವಿಕ್ರಮ ಸಿಂಘೆ ಅವರು 225

ಸದಸ್ಯರ ಶ್ರೀಲಂಕಾ ಸಂಸತ್ ನಲ್ಲಿ 134 ಮತಗಳನ್ನು ಪಡೆದು ಜಯಶಾಲಿಯಾಗಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಮತ್ತು ಭಿನ್ನಮತೀಯ ಆಡಳಿತ ಪಕ್ಷದ ನಾಯಕ ಡಲ್ಲಾಸ್ ಅಲಹಪ್ಪೆರುಮಾ ಅವರು 82 ಮತಗಳನ್ನು ಪಡೆದಿದ್ದಾರೆ ಎಂದು ತಿಳಿದುಬಂದಿದೆ.

Leave a Comment