ಮುಂಬಾಯಿ : ಬಂಡಾಯ ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ತನ್ನ ಬಳಿ ಪಕ್ಷದ 40 ಶಾಸಕರ ಬೆಂಬಲ ತಿಳಿಸಿದ ಬೆನ್ನಲ್ಲೇ ಶಿವಸೇನೆ ಸಂಸದ ಹಾಗೂ ಪಕ್ಷದ ವಕ್ತಾರ ಸಂಜಯ್ ರಾವುತ್ ಮಹಾರಾಷ್ಟ್ರ ವಿಧಾನಸಭೆ ವಿಸರ್ಜನೆಯ ಸುಳಿವು ನೀಡಿದ್ದಾರೆ.
ಮಹಾರಾಷ್ಟ್ರ ದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟು ವಿಧಾನಸಭೆ ವಿಸರ್ಜನೆಯತ್ತ ಸಾಗುತ್ತಿದೆ ಎಂದು ರಾವುತ್ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಈ ರಾಜಕೀಯ ಬಿಕ್ಕಟ್ಟಿನ ನಡುವೆ ಇವತ್ತು ಮಧ್ಯಾಹ್ನ 1 ಗಂಟೆಗೆ ಮುಖ್ಯಮಂತ್ರಿ ಉದ್ಭವ್ ಠಾಕ್ರೆ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಈ ಸಭೆ ಆದ ನಂತರ ಉದ್ಭವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಹಾಗೂ ರಾಜ್ಯ ವಿಧಾನಸಭೆ ವಿಸರ್ಜಿಸುವ ಬಗ್ಗೆ ರಾಜ್ಯಪಾಲರಲ್ಲಿ ಶಿಫಾರಸ್ಸು ಮಾಡುವ ಸಾಧ್ಯತೆ ಇದೆ. ಇದರ ಜೊತೆಗೆ ಇವರು ಕೋವಿಡ್ ಪರೀಕ್ಷೆ ಮಾಡಿಸಿದ್ದು, ಇದೀಗ ಅವರಿಗೆ ಕೋವಿಡ್ ಧೃಢಪಟ್ಟಿದೆ.