Coastal Bulletin

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಹಾಗೂ ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಹಣಕಾಸಿನ ನೆರವು ನೀಡಿದ್ದ ಆರೋಪದ ಮೇಲೆ ದೋಷಿ ಎಂದು ಸಾಬೀತಾಗಿರುವ ಉಗ್ರ ಯಾಸಿನ್ ಮಲಿಕ್‌ ಗೆ ದೆಹಲಿಯ ಎನ್‌ಐಎ ನ್ಯಾಯಾಲಯ ಜೀವಾವದಿ ಶಿಕ್ಷೆ ಪ್ರಕಟಿಸಿದೆ.

5 ಪ್ರಕರಣಗಳಿಗೆ ಸಂಬಂಧಿಸಿ ಇಂದು ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಎರಡು ಜೀವಾವಧಿ ಶಿಕ್ಷೆ ಜೊತೆಗೆ 10 ವರ್ಷಗಳ ಕಠಿಣ ಶಿಕ್ಷೆಯನ್ನು ದೆಹಲಿ ನ್ಯಾಯಾಲಯ ವಿಧಿಸಿದೆ. ಒಂದು ಪ್ರಕರಣದಲ್ಲಿ 10 ಲಕ್ಷ ರೂಪಾಯಿ, ಎರಡನೇ ಪ್ರಕರಣದಲ್ಲಿ 5 ಸಾವಿರ ರೂಪಾಯಿ ದಂಡವನ್ನು ವಿಧಿಸಲಾಗಿದೆ.

2017ರಲ್ಲಿ ಕಾಶ್ಮೀರಿ ಕಣಿವೆಯಲ್ಲಿ ನಡೆದ ಉಗ್ರ ಚಟುವಟಿಕೆಗಳು, ದಾಳಿಗಳಿಗೆ ಆರ್ಥಿಕ ನೆರವು ನೀಡಿರುವ ಪ್ರಕರಣದಲ್ಲಿ ಯಾಸಿನ್ ಮಲಿಕ್ ಕೋರ್ಟ್​ ಎದುರು ತಪ್ಪೊಪ್ಪಿಗೆ ನೀಡಿದ್ದಾನೆ. ಯಾಸಿನ್​ ವಿರುದ್ಧ ಕಾನೂನು ಬಾಹಿರ

ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸಲಾಗಿತ್ತು.

ಯಾಸಿನ್​ ಮಾಲಿಕ್ ವಿರುದ್ಧ ಯುಎಪಿಎ ಕಾಯ್ದೆ ಸೆಕ್ಷನ್ 16 (ಭಯೋತ್ಪಾದನೆ), 17 (ಭಯೋತ್ಪಾದನೆಗೆ ನಿಧಿ ಸಂಗ್ರಹ), 18 (ಭಯೋತ್ಪಾದಕ ಕೃತ್ಯಕ್ಕೆ ಸಂಚು) ಹಾಗೂ 20 (ಭಯೋತ್ಪಾದಕ ಸಂಘಟನೆಯ ಸದಸ್ಯನಾಗಿರುವುದು), ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ ಸೆಕ್ಷನ್ 120-ಬಿ (ಅಪರಾಧ ಸಂಚು) ಮತ್ತು ಭಾರತೀಯ ದಂಡಸಂಹಿತೆಯ 124-ಎ (ದೇಶದ್ರೋಹ) ಪ್ರಕರಣಗಳನ್ನು ದಾಖಲಿಸಲಾಗಿತ್ತು. ನ್ಯಾಯಾಲಯದ ಎದುರು ತನ್ನ ಮೇಲಿನ ಆರೋಪಗಳನ್ನು ಯಾಸಿನ್​ ಮಲಿಕ್ ಒಪ್ಪಿಕೊಂಡಿದ್ದ.

Leave a Comment