ಮ್ಯಾನ್ಮಾರ್ ಮತ್ತು ಥೈಲ್ಯಾಂಡ್‌ನಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ ಸಾವನ್ನಪ್ಪಿದವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಈಗಾಗಲೇ ಮ್ಯಾನ್ಮಾರ್‌ನಲ್ಲಿ ಸುಮಾರು 1,000 ಜನರು ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ. ಥೈಲ್ಯಾಂಡ್‌ನಲ್ಲೂ ಇದೇ ರೀತಿಯ ಪರಿಸ್ಥಿತಿ ಇದ್ದು, ಘಟನೆಯ ಸಮಯದಲ್ಲಿ ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ.ಅನೇಕರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ರಕ್ಷಣಾ ಕಾರ್ಯಾಚರಣೆಗಳ ಮೂಲಕ ಅವರನ್ನು ತಕ್ಷಣವೇ ಸ್ಥಳಾಂತರಿಸಲಾಗುತ್ತಿದೆ. ಈ ಪ್ರದೇಶಗಳಲ್ಲಿ ರಿಕ್ಟರ್ ಮಾಪಕದಲ್ಲಿ 7.7 ತೀವ್ರತೆಯ ಭೂಕಂಪ ಸಂಭವಿಸಿದೆ.
ಮ್ಯಾನ್ಮಾರ್ ಮತ್ತು ಬ್ಯಾಂಕಾಕ್‌ನಲ್ಲಿ ದೊಡ್ಡ ಭೂಕಂಪ ಸಂಭವಿಸಿದೆ. ಕಣ್ಣೆದುರೇ ಬೃಹತ್ ಕಟ್ಟಡಗಳು ಧರಾಶಾಹಿಯಾಗಿವೆ. ಆ ದೃಶ್ಯಗಳು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಎರಡು ಕಟ್ಟಡಗಳನ್ನು ಸಂಪರ್ಕಿಸುವ ಸೇತುವೆಯಂತಹ ರಚನೆಯೂ ಕುಸಿದು ಬಿದ್ದಿದೆ. ಅದೃಷ್ಟವಶಾತ್, ಕಟ್ಟಡಗಳು ಕುಸಿಯದ ಕಾರಣ ದೊಡ್ಡ ಅಪಘಾತವೊಂದು ತಪ್ಪಿದೆ. ಆದರೂ, ಭೂಕಂಪದ ಪರಿಣಾಮವಾಗಿ ಅನೇಕ ಕಟ್ಟಡಗಳು ಕುಸಿದು ನೂರಾರು ಜನರು ಸಾವನ್ನಪ್ಪಿದ್ದಾರೆ. ಇನ್ನು ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಯುಎಸ್ ಭೂವೈಜ್ಞಾನಿಕ ಸಮೀಕ್ಷೆಯು ಸಾವಿರ ಜನರು ಸಾವನ್ನಪ್ಪಿರಬಹುದು ಎಂದು ಅಂದಾಜಿಸಿದೆ. ಆದರೆ ಅಧಿಕೃತ ಮೂಲಗಳು ಇಲ್ಲಿಯವರೆಗೆ 200 ಸಾವುಗಳನ್ನು ವರದಿ ಮಾಡಿವೆ. ಅವಶೇಷಗಳ ಅಡಿಯಲ್ಲಿ ಅನೇಕ ಜನರು ಸಿಲುಕಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮಧ್ಯರಾತ್ರಿಯಲ್ಲಿ ಮತ್ತೊಮ್ಮೆ ಭೂಮಿ ಅದುರಿರುವ ಅನುಭವ ಆಗಿದ್ದರಿಂದ ಈ ಪ್ರದೇಶಗಳ ಜನರು ಮತ್ತೆ ಭಯದಲ್ಲಿ ಬದುಕುತ್ತಿದ್ದಾರೆ.
ಮ್ಯಾನ್ಮಾರ್ ರಾಜಧಾನಿ ನೇಪಿಡಾವ್‌ನಲ್ಲಿರುವ ವೇಯಿ ಪಡ್ಗಲನ್ ಆಸ್ಪತ್ರೆ
ಕೂಡ ಕುಸಿದಿದೆ. ಈ ಘಟನೆಯಲ್ಲಿ ಗಾಯಾಳುಗಳು ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹತ್ತಿರದ ಎತ್ತರದ ಕಟ್ಟಡಗಳು ಮತ್ತು ದೇವಾಲಯಗಳು ಸಹ ಕುಸಿದಿವೆ. ಮ್ಯಾನ್ಮಾರ್ ಅನ್ನು ಅಪ್ಪಳಿಸಿದ 7.7 ತೀವ್ರತೆಯ ಭೂಕಂಪದಿಂದ ಚೀನಾ ಕೂಡ ನಡುಗಿದೆ. ಈ ಭೂಕಂಪದಿಂದಾಗಿ ಯುನ್ನಾನ್ ಪ್ರಾಂತ್ಯದಲ್ಲಿ ಕಟ್ಟಡವೊಂದರ ಛಾವಣಿ ಕುಸಿದು ಪ್ರವಾಹ ಉಂಟಾಗಿ ಜನಜೀವನ ಅಲ್ಲೋಲ ಕಲ್ಲೊಲವಾಗಿದೆ. ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ.
ಇನ್ನೊಂದೆಡೆ ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್‌ನಲ್ಲಿ ಸಂಭವಿಸಿದ ಭೂಕಂಪದಲ್ಲಿ ಕನಿಷ್ಠ 694 ಜನರು ಸಾವನ್ನಪ್ಪಿದ್ದಾರೆ ಎಂದು ಮ್ಯಾನ್ಮಾರ್ ಮಿಲಿಟರಿ ಆಡಳಿತಗಾರರು ಮಾಹಿತಿ ನೀಡಿದ್ದಾರೆ.
ಭಾರತ ಬೆಂಬಲ:
ಭಾರಿ ಭೂಕಂಪದಿಂದ ತತ್ತರಿಸಿದ ಮ್ಯಾನ್ಮಾರ್‌ಗೆ ಭಾರತ ಬೆಂಬಲವಾಗಿ ನಿಂತಿದೆ. ಈ ಆದೇಶದ ಪ್ರಕಾರ 15 ಟನ್ ಪರಿಹಾರ ಸಾಮಗ್ರಿಗಳನ್ನು ಕಳುಹಿಸಲಾಗುತ್ತಿದೆ. ಇದರಲ್ಲಿ ಆಹಾರ ಪದಾರ್ಥಗಳು ಮತ್ತು ಅಗತ್ಯ ವಸ್ತುಗಳು ಸೇರಿವೆ. ಇವುಗಳನ್ನು ವಾಯುಪಡೆ ನಿಲ್ದಾಣದಿಂದ IAFC ವಿಮಾನದಲ್ಲಿ ಸಾಗಿಸಲು ಎಲ್ಲಾ ವ್ಯವಸ್ಥೆಗಳು ಪೂರ್ಣಗೊಂಡಿವೆ.














