ಶ್ರೀನಗರ:ಕಾಶ್ಮೀರದಲ್ಲಿ ಹತ್ಯೆಗಳು ಹೆಚ್ಚಾಗುತ್ತಿದ್ದು, ಶುಕ್ರವಾರ ಸಂಜೆ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಗ್ರೆನೇಡ್ ದಾಳಿಯಲ್ಲಿ ಇಬ್ಬರು ವಲಸೆ ಕಾರ್ಮಿಕರು ಗಾಯಗೊಂಡಿದ್ದಾರೆ.
'ಶೋಪಿಯಾನ್ ಜಿಲ್ಲೆಯ ಅಗ್ಲಾರ್ ಜೈನಾಪೋರಾದಲ್ಲಿ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಇದರ ಪರಿಣಾಮವಾಗಿ ಇಬ್ಬರು ವಲಸೆ ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದಿವೆ. ಹೆಚ್ಚಿನ
ವಿವರಗಳನ್ನು ನೀಡಲಾಗುವುದು' ಎಂದು ಪೊಲೀಸ್ ಇಲಾಖೆಯು ಟ್ವೀಟ್‌ನಲ್ಲಿ ತಿಳಿಸಿದೆ.
ಗಾಯಗೊಂಡ ಇಬ್ಬರು ಕಾರ್ಮಿಕರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.













