ಕಾರ್ಗಿಲ್ ಯುದ್ಧ ನಡೆದು ಇಂದಿಗೆ(ಜುಲೈ 26)22 ವರ್ಷ. ಪಾಕಿಸ್ತಾನ ಸೈನಿಕರ ಹುಟ್ಟಡಗಿಸಿ ಭಾರತೀಯ ಸೈನ್ಯ ವಿಜಯ ಪತಾಕೆ ಹಾರಿಸಿದ ದಿನ. ಆ ರೋಚಕ ಕ್ಷಣದ ನೆನಪಿಗಾಗಿ ಕಾರ್ಗಿಲ್ ವಿಜಯ ದಿವಸ ಆಚರಿಸಲಾಗುವುದು.1999 ಜುಲೈ 26ರಂದು ಭಾರತ ಪಾಕಿಸ್ತಾನ ವಿರುದ್ಧ ಸಾರಿದ ಸಮರದಲ್ಲಿ ಸಂಪೂರ್ಣ ಜಯಶಾಲಿಯಾಯಿತು.
ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಹುತಾತ್ಮರಾದ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾರ್ಗಿಲ್ ವಿಜಯ್ ದಿವಸ್ ದಂದು ನಮ್ಮ ರಾಷ್ಟ್ರವನ್ನು ರಕ್ಷಿಸುವ ಕಾರ್ಗಿಲ್ ನಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ಗೌರವ ಸಲ್ಲಿಸುತ್ತೇನೆ. ಕಾರ್ಗಿಲ್
ನಲ್ಲಿ ಹುತಾತ್ಮರಾದ ಯೋಧರ ಧೈರ್ಯ ಪ್ರತಿದಿನ ನಮ್ಮನ್ನು ಪ್ರೇರೇಪಿಸುತ್ತದೆ. ಅವರ ತ್ಯಾಗ, ಶೌರ್ಯವನ್ನು ನಾವು ನೆನಪಿಸಿಕೊಳ್ಳುತ್ತೇವೆ ಎಂದಿದ್ದಾರೆ.
ಟ್ವೀಟ್ ಜೊತೆ ಕಳೆದ ವರ್ಷ ಕಾರ್ಗಿಲ್ ನಲ್ಲಿ ಹುತಾತ್ಮರಾದ ಯೋಧರ ಬಗ್ಗೆ ಮನ್ ಕೀ ಬಾತ್ ರೆಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿರುವ ಆಡಿಯೋ ತುಣಕನ್ನು ಹಾಕಿದ್ದಾರೆ.















