Coastal Bulletin

ನವದೆಹಲಿ:ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಸಲ ದೆಹಲಿಗೆ ತೆರಳಿರುವ ಬಸವರಾಜ ಬೊಮ್ಮಾಯಿ ಪ್ರಧಾನಿ ಮೋದಿ ಅವರನ್ನು ಭೇಟಿ ಆಗಿ ಮಾತುಕತೆ ನಡೆಸಿದರು.

ಪ್ರಧಾನಿ ಮೋದಿಯವರನ್ನು ಭೇಟಿಯಾದ ಮುಖ್ಯಮಂತ್ರಿ ಬೊಮ್ಮಾಯಿ, ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಮತ್ತು ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಜೊತೆಗೆ ಕಲಬುರಗಿಯ ಇಎಸ್ಐ ವೈದ್ಯಕೀಯ ಕಾಲೇಜು ಮತ್ತು

ಆಸ್ಪತ್ರೆಯನ್ನು ಪ್ರಾದೇಶಿಕ ಏಮ್ಸ್ ಮಾದರಿಯ ಸಂಸ್ಥೆಯನ್ನಾಗಿ ಉನ್ನತೀಕರಿಸುವಂತೆ ಮನವಿ ಮಾಡಿದರು.

ಇದೇ ವೇಳೆ ನೂತನ ಮುಖ್ಯಮಂತ್ರಿಯವರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ಕರ್ನಾಟಕದ ಅಭಿವೃದ್ಧಿಗೆ ಎಲ್ಲ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

Leave a Comment