Coastal Bulletin

ಕರ್ನಾಟಕದಲ್ಲಿ ಕೋವಿಡ್ ಎರಡನೇ ಅಲೆಯ ಅಬ್ಬರ ತಗ್ಗಿದ ಹಿನ್ನೆಲೆಯಲ್ಲಿ ನಾಲ್ಕನೇ ಹಂತದ ಅನ್‌ಲಾಕ್ ಪ್ರಕ್ರಿಯೆ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಇಂದು ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿ ಕೆಲವು ಮಹತ್ವದ ತೀರ್ಮಾನಗಳನ್ನು ಕೈಗೊಂಡರು.

ಕಳೆದ ಮೂರು ತಿಂಗಳಿನಿಂದ ಮುಚ್ಚಿದ್ದ ಚಿತ್ರಮಂದಿರಗಳನ್ನು ಜುಲೈ 19 ರಿಂದ ತೆರೆಯಲು ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗಿದೆ. ಸರ್ಕಾರ ಶೇಕಡ 50 ರಷ್ಟು

ಪ್ರೇಕ್ಷಕರ ಭರ್ತಿಗೆ ಮಾತ್ರ ಅವಕಾಶ ಕಲ್ಪಿಸಿ  ನಿರ್ಬಂಧ ವಿಧಿಸಿದೆ.ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಚಿತ್ರರಂಗ ಮತ್ತು ರಂಗಭೂಮಿ ಕೊಂಚ ಚೇತರಿಕೆ ಕಾಣಲಿದೆ.


Leave a Comment