ಕರ್ನಾಟಕದಲ್ಲಿ ಜೂನ್ 14ರ ವರೆಗೆ ಲಾಕ್ ಡೌನ್ ವಿಸ್ತರಣೆಯಾಗಿದ್ದರೂ ಅದಕ್ಕೆ ಮುನ್ನವೇ ಲಾಕ್ ಡೌನ್ ತೆರವು ಸಾಧ್ಯತೆ
ಕರ್ನಾಟಕದಲ್ಲಿ ಜೂನ್ 14ರ ವರೆಗೆ ಲಾಕ್ ಡೌನ್ ವಿಸ್ತರಣೆಯಾಗಿದ್ದರೂ ಅದಕ್ಕೆ ಮುನ್ನವೇ ಲಾಕ್ ಡೌನ್ ತೆರವು ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ರಾಜ್ಯದಲ್ಲಿ ಕೊರೋನಾ ಪ್ರಕರಣ ಇಳಿಮುಖವಾಗುತ್ತಿರುವ ಕಾರಣ ಹಂತ ಹಂತವಾಗಿ ವಾಣಿಜ್ಯ ಚಟುವಟಿಕೆಗಳಿಗೆ ಮತ್ತೆ ಜೀವ ನೀಡಲು ಸಿದ್ದತೆ ನಡೆದಿದೆ.ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ರೇಟ್ ಶೇ.10ಕ್ಕಿಂತ ಕೆಳಗಿಳಿದಿದೆ ಈ ನಿಟ್ಟಿನಲ್ಲಿ ಸಚಿವರು, ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ
ಸೋಂಕು ಕಡಿಮೆ ಇರುವ ಜಿಲ್ಲೆಗಳಲ್ಲಿ ಅನ್‍ಲಾಕ್ ಮಾಡುವ ಬಗ್ಗೆ ಸಮಾಲೋಚನೆ ನಡೆಸಲು ಯಡಿಯೂರಪ್ಪ ತಯಾರಿ ನಡೆಸಿದ್ದಾರೆ.
ಅನ್‍ಲಾಕ್ ಸಂಬಂಧ ನಾಳೆ(ಜೂನ್ 7) ಮಧ್ಯಾಹ್ನ ಕೋವಿಡ್ ಟಾಸ್ಕ್ ಫೋರ್ಸ್ ಮೀಟಿಂಗ್ ನಡೆಯಲಿದ್ದು ಜಿಲ್ಲಾವಾರು ಹಂತ ಹಂತವಾಗಿ ಅನ್‍ಲಾಕ್ ಮಾಡುವ ಬಗ್ಗೆ ಸಿಎಂ ಚರ್ಚೆ ನಡೆಸಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ದೆಹಲಿ ಮತ್ತು ಮಹಾರಾಷ್ಟ್ರಗಳು ನಿಧಾನವಾಗಿ ಅನ್‍ಲಾಕ್ ಆಗುತ್ತಿರುವುದು ಮುಖ್ಯಮಂತ್ರಿಯವರಿಗೆ ಧೈರ್ಯ ನೀಡಿದೆ.















