ಬೆಂಗಳೂರು : ಕೋವಿಡ್ -19 ಪ್ರಕರಣಗಳು ನಿರಂತರವಾಗಿ ಇಳಿಮುಖವಾಗುತ್ತಿರುವಾಗ, ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಜೂನ್ 21 ರಿಂದ ರಾಜ್ಯದಲ್ಲಿ ಲಾಕ್‌ಡೌನ್ ನಿರ್ಬಂಧವನ್ನು ಮತ್ತಷ್ಟು ಸಡಿಲಿಸಿದ್ದಾರೆ.
ಕೋವಿಡ್ ಪ್ರಕರಣಗಳ ನಿರಂತರ ಕುಸಿತಕಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರವರು ಇಂದು ಮುಂದಿನ ಲಾಕ್ ಡೌನ್ ನಿಯಮಾವಳಿಗಳ ಬಗ್ಗೆ ವಿವರಿಸಿದರು. ಪಾಸಿಟಿವ್ ರೇಟ್ 5 % ಕಡಿಮೆ ಇದ್ದ 16 ಜಿಲ್ಲೆಗಳಲ್ಲಿ 50% ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಬಸ್ಸುಗಳು ಮತ್ತು ಮೆಟ್ರೋ ಸೇವೆಗಳನ್ನು.50% ಕ್ಕಿಂತ ಕಡಿಮೆ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಬಲ್ಲವು. ಎಲ್ಲಾ ಅಂಗಡಿಗಳು ಮತ್ತು ಹೋಟೆಲ್‌ಗಳು, ಕ್ಲಬ್‌ಗಳು, ರೆಸ್ಟೋರೆಂಟ್‌ಗಳು ಸಂಜೆ 5 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶವಿದೆ. ವಸತಿಗೃಹಗಳು, ರೆಸಾರ್ಟ್‌ಗಳು, ಜಿಮ್‌ಗಳು, ಖಾಸಗಿ ಕಚೇರಿಗಳು 16 ಜಿಲ್ಲೆಗಳಲ್ಲಿ 50% ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅವಕಾಶವಿದೆ ಎಂದು
ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಪ್ರಕಟಿಸಿದರು.
ರಾಜ್ಯದ 11 ಜಿಲ್ಲೆಗಳಾದ ಚಿಕ್ಕಮಗಳೂರು , , ದಾವಣಗೆರೆ , ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮೀಣ, ಮಂಡ್ಯ, ಬೆಳಗಾವಿ ಮತ್ತು ಕೊಡಗುಗಳಲ್ಲಿ ಕಟ್ಟುನಿಟ್ಟಾದ ಲಾಕ್ ಡೌನ್ ಕ್ರಮಗಳನ್ನು ಜಾರಿಗೆ ತಂದಿದೆ.
ಇತರ 19 ಜಿಲ್ಲೆಗಳಲ್ಲಿ ಕರ್ನಾಟಕ ಕಳೆದ ವಾರ ಉದ್ಯಾನವನಗಳು ಮತ್ತು ಕೈಗಾರಿಕಾ ಘಟಕಗಳನ್ನು ತೆರೆಯುವುದು ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳ ಅವಧಿಯನ್ನು ಮಧ್ಯಾಹ್ನ 2 ಗಂಟೆಯವರೆಗೆ ವಿಸ್ತರಿಸುವುದು, ಆಟೋಗಳು ಮತ್ತು ಟ್ಯಾಕ್ಸಿಗಳಿಗೆ ಗರಿಷ್ಠ ಎರಡನ್ನು ಓಡಿಸಲು ಅನುಮತಿ ನೀಡಲಾಗಿತ್ತು.















