Coastal Bulletin

ಕಾಸರಗೋಡು:ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ. ಸಜಿತ್ ಬಾಬು ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಅದೇಶ ಹೊರಡಿಸಿದ್ದು ನೂತನ ಜಿಲ್ಲಾಧಿಕಾರಿಯಾಗಿ ಭಂಡಾರಿ ಸ್ವಾಗತ್ ರಣ್ವೀರ್ ಚಂದ್ ನೇಮಕ ಮಾಡಿದೆ. ಅವರು ಕಾಸರಗೋಡಿನ ಪ್ರಥಮ ಮಹಿಳಾ ಜಿಲ್ಲಾಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

2010ರ ಬ್ಯಾಚ್ ನ ಐಎಎಸ್ ಅಧಿಕಾರಿಯಾದ ಭಂಡಾರಿ ಸ್ವಾಗತ್ ರಣ್ವೀರ್ ಚಂದ್ ನಾಗರಿಕ ಸೇವೆ ಪರೀಕ್ಷೆಯಲ್ಲಿ 69ನೇ ಶ್ರೇಯಾಂಕ ಪಡೆದಿದ್ದರು.ಈ ಹಿಂದೆ ಕೇರಳದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ

ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.ಇನ್ನು ಡಾ.ಡಿ. ಸಜಿತ್ ಬಾಬು ಅವರನ್ನು ಕೇರಳ ಸರಕಾರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗೆ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.ಭಂಡಾರಿ ಸ್ವಾಗತ್ ಅವರು ಕಾಸರಗೋಡಿನ 24ನೇ ಜಿಲ್ಲಾಧಿಕಾರಿ.

Leave a Comment