ಕಾಸರಗೋಡು : ಮುಂಗಾರು ಮಳೆ ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆ, ನಾಳೆ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ.

Coastal Bulletin
ಕಾಸರಗೋಡು : ಮುಂಗಾರು ಮಳೆ ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆ, ನಾಳೆ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ.

ಕಾಸರಗೋಡು: ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ(ಜು.15) ಕಾಸರಗೋಡು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಕಾಸರಗೋಡು ಜಿಲ್ಲಾಧಿಕಾರಿ ಕೆ.ಇಂಪಾಶೇಖರ್ ಆದೇಶ ನೀಡಿದ್ದಾರೆ.

ಕಾಸರಗೋಡು ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಲ್ಲಿ ಭಾರೀ ಮಳೆಯಾಗಿದೆ. ಮುಂಗಾರು ಚುರುಕುಗೊಳ್ಳುತ್ತಿರುವುದರಿಂದ ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿರುವ ರಾಜ್ಯ, ಸಿಬಿಎಸ್‌ಇ, ಐಸಿಎಸ್‌ಸಿ ಶಾಲೆಗಳು,

ಕೇಂದ್ರೀಯ ವಿದ್ಯಾಲಯಗಳು, ಅಂಗನವಾಡಿಗಳು ಮತ್ತು ಮದರಸಾಗಳು ಮುಂತಾದವುಗಳಿಗೆ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ರಜಾ ಘೋಷಣೆ.. ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ರಜೆಯಿಂದ ಕಳೆದು ಹೋಗಿರುವ ಅಧ್ಯಯನ ಸಮಯವನ್ನು ಹೊಂದಿಸಲು ಕ್ರಮಕೈಗೊಳ್ಳಬೇಕು. ಕಾಲೇಜುಗಳಿಗೆ ನಾಳಿನ ರಜೆ ಅನ್ವಯಿಸುವುದಿಲ್ಲ. ಪೂರ್ವ ಘೋಷಿತ ಪರೀಕ್ಷೆಗಳಲ್ಲಿ ಬದಲಾವಣೆ ಇಲ್ಲ ಎಂದು ವರದಿಯಾಗಿದೆ.

Leave a Comment