ಇಂದು ಶಬರಿಮಲೆಯಲ್ಲಿ ಮಕರಜ್ಯೋತಿ ದರ್ಶನ.

Coastal Bulletin
ಇಂದು ಶಬರಿಮಲೆಯಲ್ಲಿ ಮಕರಜ್ಯೋತಿ ದರ್ಶನ.

ಪಟ್ಟಣಂತಿಟ್ಟ: ಇಂದು ಮಕರ ಸಂಕ್ರಾಂತಿ ಶುಭದಿನದಂದು ಶ್ರೀ ಅಯ್ಯಪ್ಪ ಕ್ಷೇತ್ರ ಶಬರಿಮಲೆಯಲ್ಲಿ ಸಂಜೆ ಮಕರಜ್ಯೋತಿ ದರ್ಶನವಾಗಲಿದೆ. ಮಕರವಿಳಕ್ಕು ಆಚರಣೆ ಮತ್ತು ಮಕರಜ್ಯೋತಿ ದರ್ಶನಕ್ಕಾಗಿ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.

ಮಾಧ್ಯಮಗಳ ಜೊತೆ ಈ ಬಗ್ಗೆ ಮಾತನಾಡಿದ ಟಿಡಿಬಿ ಅಧ್ಯಕ್ಷ ಪಿ.ಎಸ್‌. ಪ್ರಶಾಂತ್‌, ಮಕರವಿಳಕ್ಕು ಹಬ್ಬದ ಪ್ರಯುಕ್ತ ದೇವಸ್ಥಾನದಲ್ಲಿ ಹೆಚ್ಚಿನ ಜನರು ಸೇರಲಿದ್ದಾರೆ. ಅಲ್ಲದೇ ಮಕರಜ್ಯೋತಿ ದರ್ಶನವೂ ಸಹ ಇರುವುದರಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತರು, ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ನೀಡುವ ಸೂಚನೆಯನ್ನು ಪಾಲಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಅಲ್ಲದೇ ಈ ಸಮಯದಲ್ಲಿ ಭಕ್ತರಿಗೆ ಹಂಚಲು ತಮಿಳುನಾಡಿನ ಹಿಂದೂ ಚಾರಿಟೇಬಲ್‌ ಟ್ರಸ್ಟ್‌ವೊಂದು 80 ಲಕ್ಷ ಬಿಸ್ಕತ್‌ಗಳನ್ನು ದಾನ ನೀಡಿದೆ. ಇದನ್ನು ಸೋಮವಾರ ಔಷಧಯುಕ್ತ ನೀರಿನ ಜೊತೆಗೆ ಭಕ್ತರಿಗೆ ಹಂಚಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಶಬರಿಮಲೆಯ ಎರಡು ತಿಂಗಳ ಪವಿತ್ರ ವ್ರತಾಚರಣೆಯ ಕೊನೆಯ ದಿನವಾದ ಮಕರ ಸಂಕ್ರಮಣದಂದು 'ಮಕರ ಜ್ಯೋತಿ'ಯ ದರ್ಶನವಾಗುತ್ತದೆ. ಮಕರಜ್ಯೋತಿಯ ದರ್ಶನಕ್ಕಾಗಿ ದೇಶದ ನಾನಾ ಮೂಲೆಗಳಿಂದ ಲಕ್ಷಾಂತರ ಭಕ್ತರು ಶಬರಿಮಲೆಗೆ ಆಗಮಿಸುತ್ತಾರೆ.ಶಬರಿಮಲೆಗೆ ವಿರುದ್ಧ ದಿಕ್ಕಿನಲ್ಲಿರುವ ಪೊನ್ನಂಬಲಮೇಡು ಗಿರಿಯಲ್ಲಿ ಮಕರಜ್ಯೋತಿ ಕಾಣಿಸಿಕೊಳ್ಳುತ್ತದೆ. ಪ್ರತಿವರ್ಷ ಜನವರಿ 14 ಅಥವಾ 15ರಂದು  ಅಯ್ಯಪ್ಪ ಸ್ವಾಮಿಗೆ ಸಂಜೆ 7 ಗಂಟೆಗೆ ನಡೆಯುವ ಮಹಾಮಂಗಳಾರತಿ ಬಳಿಕ ಮಕರ ಜ್ಯೋತಿಯ ದರ್ಶನವಾಗುತ್ತದೆ. ಮಕರಜ್ಯೋತಿಯು ಮೂರು ಬಾರಿ ದೇದೀಪ್ಯಮಾನವಾಗಿ ಮಿಣುಗಿ ಅದೃಶ್ಯವಾಗುತ್ತದೆ.

Leave a Comment