ತಿರುವನಂತಪುರಂ : ಕೇರಳದ ದಕ್ಷಿಣ ಹಾಗೂ ಮಧ್ಯಭಾಗದ ಜಿಲ್ಲೆಗಳಲ್ಲಿ ಮುಂದಿನ ಇಪ್ಪತ್ನಾಲ್ಕು ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯಿರುವ ಕಾರಣ ಹವಾಮಾನ ತಜ್ಞರು ರಾಜ್ಯದ ಐದು ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಿದ್ದಾರೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ತಿರುವನಂತಪುರ, ಕೊಲ್ಲಂ, ಅಲಪ್ಪುಳ, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ
ಮುನ್ಸೂಚನೆ ಇರುವ ಕಾರಣ, ಆ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣ, ಮುಂದಿನ ಇಪ್ಪತ್ನಾಲ್ಕು ಗಂಟೆಗಳಲ್ಲಿ ರಾಜ್ಯದ ವಿವಿಧೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.














