ಕನಕಪುರ ಮೂಲದ ಅಯ್ಯಪ್ಪ ಮಾಲಾಧಾರಿಯೊಬ್ಬರು ಶಬರಿಮಲೆಯಲ್ಲಿ ದೇವಾಲಯದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಮಾರ್ (40) ಎಂಬುವವರು ದೇವಾಲಯದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದು, ಘಟನೆಯ ವಿಡಿಯೋ ಸೆರೆಯಾಗಿದೆ.
ರಾಮನಗರ ಜಿಲ್ಲೆ ಕನಕಪುರ ಮೂಲದ ಅಯ್ಯಪ್ಪ ಭಕ್ತ ಶಬರಿಮಲೆಯಲ್ಲಿ ಆತ್ಮಹತ್ಯೆ ಶರಣಾದ ವ್ಯಕ್ತಿ ಆಗಿದ್ದಾರೆ. ಕನಕಪುರದ ಮದ್ದೂರಮ್ಮ ಬೀದಿ ನಿವಾಸಿ ಕುಮಾರ್ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಶಬರಿಮಲೆ ದೇವಾಲಯದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ದೇವಾಲಯದ ಮೇಲಿಂದ ಜಿಗಿಯುವ ವೀಡಿಯೋ ಭಕ್ತರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಇನ್ನು ಮೃತ ಕುಮಾರ್ ಗಾರೆ ಕೆಲಸ ಮಾಡಿಕೊಂಡಿದ್ದನು.
ಕಳೆದ ಎರಡು ದಿನಗಳ
ಹಿಂದೆ ಕುಮಾರ್ ಸೇರಿದಂತೆ ಒಟ್ಟು 6 ಜನರು ಕನಕಪುರದಿಂದ ಶಬರಿಮಲೆಗೆ ತೆರಳಿದ್ದರು. ಈ ವೇಳೆ ಅಯ್ಯಪ್ಪನ ದರ್ಶನ ಪಡೆದ ಬಳಿಕ ಕುಮಾರ್ ದೇವಾಲಯದ ಶೆಲ್ಟರ್ ಮೇಲಿಂದ ಜಿಗಿದಿದ್ದಾನೆ. ಕೂಡಲೇ ಶಬರಿಮಲೆ ಸನ್ನಿದಾನದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ. ನಂತರ, ಹೆಚ್ಚಿನ ಚಿಕಿತ್ಸೆಗಾಗಿ ಕೊಟ್ಟಾಯಂ ಮೆಡಿಕಲ್ ಕಾಲೇಜಿಗೆ ರವಾನೆ ಮಾಡುವಾಗ ಮಾರ್ಗಮಧ್ಯೆ ಸಾವಿಗೀಡಾಗಿದ್ದಾನೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.