Coastal Bulletin

ಕಾಸರಗೋಡು : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಕಾಸರಗೋಡಿಗೆ ಭೇಟಿ ನೀಡಲಿದ್ದು, ಅಲ್ಲಿ ನಡೆಯುವ ಪೆರಿಯ ಕೇಂದ್ರ ವಿಶ್ವವಿದ್ಯಾನಿಲಯದ ಐದನೇ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲಿರುವರು.

ಮಧ್ಯಾಹ್ನ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿರುವ ರಾಷ್ಟçಪತಿಯವರು ಅಲ್ಲಿಂದ ೩.೨೦ಕ್ಕೆ ಪೆರಿಯದಲ್ಲಿರುವ ಹೆಲಿಪ್ಯಾಡ್‌ಗೆ ಬರಲಿದ್ದಾರೆ.

ಕೇರಳ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್, ಕೇರಳ ಸ್ಥಳಿಯಾಡಳಿತ ಸಚಿವ ಎಂ.ವಿ ಗೋವಿಂದನ್ ಮಾಸ್ಟರ್ ಹಾಗೂ

ಇನ್ನಿತರ ಗಣ್ಯರು ಉಪಸ್ಥಿತರಿರುವರು.  

ರಾಷ್ಟ್ರಪತಿ  ಆಗಮನದ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಸಂಚಾರ ನಿಯಂತ್ರಣ ಜಾರಿಗೆ ತರಲಾಗಿದೆ. ಬಸ್ಸು ಹಾಗೂ ಇತರ ಲಘ ವಾಹನಗಳನ್ನು ನಿಯಂತ್ರಣದೊಂದಿಗೆ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಮೂಲಗಳು ತಿಳಿಸಿದೆ.

Leave a Comment