Coastal Bulletin

ತಿರುವನಂತಪುರಂ, ಏಪ್ರಿಲ್ 27: ದೇಶದಲ್ಲಿ ಕೊರೊನಾ ನಾಲ್ಕನೇ ಅಲೆ ಭೀತಿ ಹೆಚ್ಚಾಗಿರುವ ಹಿನ್ನಲೆ ಈಗಾಗಲೇ ಹಲವು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾಸ್ಕ್, ಸಾಮಾಜಿಕ ಅಂತರವನ್ನ ಕಡ್ಡಾಯ ಮಾಡಿದ್ದಾರೆ. ಜೊತೆಗೆ ನಿಯಮ ಉಲ್ಲಂಘಿಸಿದರೆ ದಂಡ ಹಾಗೂ ಕಠಿಣ ಶಿಕ್ಷೆ ಎಂದು ಎಚ್ಚರಿಕೆ ನೀಡಿದೆ.

ದೆಹಲಿ, ಉತ್ತರ ಪ್ರದೇಶ, ತಮಿಳುನಾಡು, ಕರ್ನಾಟಕ, ಛತ್ತೀಸ್‌ಘರ್, ಪಂಜಾಬ್ ರಾಜ್ಯಗಳು ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನ ಕಡ್ಡಾಯ ಎಂದು ಘೋಷಣೆ ಮಾಡಿದ್ದವು. ಈಗ ಕೇರಳ ಕೂಡ ಮಾಡಿದ್ದು, ದೇಶಾದ್ಯಂತ ಕೊರೊನಾ ನಾಲ್ಕನೇ ಅಲೆ ಭೀತಿ ಶುರುವಾಗಿದೆ.

ಬೆಳಗ್ಗೆ ಪ್ರಧಾನಿ ಮೋದಿ ಕೂಡ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜೊತೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಿ, ಕೊರೊನಾ ಸ್ಥಿತಿಗತಿ ಹೇಗಿದೆ ಎಂಬುದರ ಬಗ್ಗೆ

ಮಾಹಿತಿ ಪಡೆದುಕೊಂಡರು. ಜೊತೆಗೆ ನಾಲ್ಕನೇ ಅಲೆ ಆತಂಕವಿರುವ ಹಿನ್ನಲೆ ಕೊರೊನಾ ವಿರುದ್ದ ಹೋರಾಡಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನ ತೆಗೆದುಕೊಳ್ಳುವಂತೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದರು. ಅಲ್ಲದೆ ಬೇರೆ ದೇಶಗಳಿಗೆ ಹೋಲಿಸಿದರೆ ಭಾರತ ಕೊರೊನಾ ವಿರುದ್ದ ಮೊದಲಿನಿಂದಲೂ ಹೋರಾಟ ಮಾಡುತ್ತಾ ಬಂದಿದೆ. ಇತ್ತೀಚೆಗಷ್ಟೇ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ಹೀಗಾಗಿ ನಾವೆಲ್ಲರೂ ಕೂಡ ಒಟ್ಟಾಗಿ ಕೊರೊನಾ ವಿರುದ್ದ ಹೋರಾಡಬೇಕು, ಹೋರಾಡೋಣ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.


Leave a Comment