ಕೇರಳದ ಎರ್ನಾಕುಲಂ ನ ಕ್ರಿಶ್ಚಿಯನ್ ಪ್ರಾರ್ಥನಾ ಮಂದಿರದಲ್ಲಿ ಸರಣಿ ಬಾಂಬ್ ಸ್ಪೋಟ- ಓರ್ವ ಮಹಿಳೆ ಸಾವು, ಹಲವರಿಗೆ ಗಂಭೀರ ಗಾಯ.

Coastal Bulletin
ಕೇರಳದ ಎರ್ನಾಕುಲಂ ನ ಕ್ರಿಶ್ಚಿಯನ್ ಪ್ರಾರ್ಥನಾ ಮಂದಿರದಲ್ಲಿ ಸರಣಿ ಬಾಂಬ್ ಸ್ಪೋಟ- ಓರ್ವ ಮಹಿಳೆ ಸಾವು, ಹಲವರಿಗೆ ಗಂಭೀರ ಗಾಯ.

ಎರ್ನಾಕುಲಂ : ಕೇರಳದ ಕ್ರಿಶ್ಚಿಯನ್ ಪ್ರಾರ್ಥನಾ ಮಂದಿರದಲ್ಲಿ ಸರಣಿ ಸ್ಪೋಟವಾಗುದ್ದು 23 ಮಂದಿ ಗಾಯಗೊಂಡಿದ್ದಾರೆ ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಕಲಮಸ್ಸೆರಿ ವೈದ್ಯಕೀಯ ಕಾಲೇಜು ಬಳಿಯ ಸಾಮ್ರಾ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ಸ್ಫೋಟ ಸಂಭವಿಸಿದೆ. ಈ ತಿಂಗಳ 27 ರಿಂದ ನಡೆಯುತ್ತಿರುವ ಯೆಹೋವನ ಸಾಕ್ಷಿಗಳ ಪ್ರಾದೇಶಿಕ ಸಮ್ಮೇಳನದ ಕೊನೆಯ ದಿನ ಇಂದು. ಈ ಸಮಾವೇಶದಲ್ಲಿ 2000ಕ್ಕೂ ಹೆಚ್ಚು ಮಂದಿ ಭಾಗವಹಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ ಬೆಳಗ್ಗೆ ಒಂಬತ್ತು ಗಂಟೆಗೆ ಸ್ಫೋಟ ಸಂಭವಿಸಿದೆ. ಅರ್ಧ ಗಂಟೆಯೊಳಗೆ ಹಲವು ಸ್ಫೋಟಗಳು ಸಂಭವಿಸಿವೆ ಎಂದು ವರದಿಯಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ತಲುಪಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಾಳುಗಳನ್ನು ಕಲಮಶ್ಶೇರಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ. ಅವರಲ್ಲಿ ಐವರ

ಸ್ಥಿತಿ ಗಂಭೀರವಾಗಿದೆ.

ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಘಟನಾ ಸ್ಥಳಕ್ಕೆ ತಲುಪುತ್ತಿದ್ದಾರೆ. ಸ್ಫೋಟ ಹೇಗೆ ಸಂಭವಿಸಿತು ಎಂಬುದು ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆಸ್ಫೋಟದ ಹಿನ್ನೆಲೆಯಲ್ಲಿ ಕಲಮಶ್ಶೇರಿ ವೈದ್ಯಕೀಯ ಕಾಲೇಜಿನಲ್ಲಿ ಹೆಚ್ಚಿನ ವ್ಯವಸ್ಥೆ ಮಾಡಲಾಗುತ್ತಿದೆ. ವೈದ್ಯಕೀಯ ಅಧೀಕ್ಷಕ ಡಾ. ಗಣೇಶ್ ಮೋಹನ್ ಮಾಹಿತಿ ನೀಡಿದರು.

Leave a Comment