Coastal Bulletin

ತಲಪಾಡಿ: ಲಾರಿ ಢಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದೆ.

ಮುಳ್ಳೇರಿಯ ಆದೂರು ನಿವಾಸಿ ವಸಂತ್ ಕುಮಾರ್(55)ಮೃತರು.ವಸಂತ್ ಅವರು ಸಂಬಂಧಿಕರ ಉತ್ತರಕ್ರಿಯೆಯಲ್ಲಿ ಪಾಲ್ಗೊಂಡು ಕೋಟೆಕಾರಿಗೆ ತೆರಳಲು ಟೋಲ್ ಗೇಟ್ ಬಳಿ ಹೆದ್ದಾರಿ ದಾಟುವ ವೇಳೆ ಕೇರಳದ ಕಡೆಯಿಂದ ಅತಿವೇಗದಿಂದ ಧಾವಿಸುತ್ತಿದ್ದ ಕಲ್ಲು ಲೋಡ್ ಇದ್ದ ಲಾರಿ ವಸಂತ್ ಅವರಿಗೆ ಢಿಕ್ಕಿ ಹೊಡೆದಿದೆ. ತಲೆಗೆ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸುವ

ದಾರಿಮಧ್ಯೆ ಸಾವನ್ನಪ್ಪಿದ್ದರು.

ಮಂಗಳೂರು ಸಂಚಾರಿ ಠಾಣಾ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದುಕೊಂಡು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತ ವಸಂತ್ ರೈ, ಪತ್ನಿ, ಮೂವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. 

ವಸಂತ್ ಕುಮಾರ್ ರೈ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಚ್ಚರಿ ಎಂದರೆ ಇದೇ ತಿಂಗಳಲ್ಲಿ ಅವರ ಇನ್ನಿಬ್ಬರು ಸಹೋದರರು ಕೂಡ ಕ್ಯಾನ್ಸರ್ ನಿಂದ ಮೃತಪಟ್ಟಿದ್ದರು.

Leave a Comment