ಕೇರಳ: ಇಬ್ಬರು ಮಕ್ಕಳಲ್ಲಿ 'ನೊರೊ ವೈರಸ್' ಪತ್ತೆ.

Coastal Bulletin
ಕೇರಳ: ಇಬ್ಬರು ಮಕ್ಕಳಲ್ಲಿ 'ನೊರೊ ವೈರಸ್' ಪತ್ತೆ.

ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ . ಇನ್ನೊಂದು ಕಡೆ ಹರಡಿತ್ತಿರು ಮಂಕಿಪಾಕ್ಸ್ ಭಯ ಜನತೆಯಲ್ಲಿ ಇದೆ. ಈ ನಡುವೆ ನೆರೆಯ ಕೇರಳದಲ್ಲಿ ಮತ್ತೊಂದು ಬಗೆಯ ವೈರಸ್ ಪತ್ತೆಯಾಗಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಕೇರಳ ರಾಜಧಾನಿ ತಿರುವನಂತಪುರದಲ್ಲಿ ಎರಡು 'ನೊರೊ ವೈರಸ್' ಪ್ರಕರಣಗಳ ದೃಢಪಟ್ಟಿವೆ ಎಂದು ವರದಿಯಾಗಿದೆ. ಅದರಲ್ಲೂ ಇಬ್ಬರು ಮಕ್ಕಳಲ್ಲಿ ವೈರಸ್ ಪತ್ತೆಯಾಗಿರುವುದಾಗಿ ವರದಿಯಾಗಿದೆ. ಇಬ್ಬರು ಮಕ್ಕಳ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ.

ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಜನರು ನೈರ್ಮಲ್ಯವನ್ನು ಕಾಪಾಡಿಕೊಳ್ಳುವಂತೆ ಜನರಲ್ಲಿ ಮನವಿ ಮಾಡಿದ್ದಾರೆ, "ಇಬ್ಬರು ಮಕ್ಕಳಲ್ಲಿ ನೊರೊವೈರಸ್ ಸೋಂಕು ಪತ್ತೆಯಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಸದ್ಯಕ್ಕೆ ಆತಂಕಪಡುವ ಅಗತ್ಯವಿಲ್ಲ ಆದರೆ ಎಲ್ಲರೂ ಜಾಗರೂಕರಾಗಿರಬೇಕು ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು" ಎಂದು ಅವರು ತಿಳಿಸಿದ್ದಾರೆ.

ಹೊಸ ವೈರಸ್ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಆರೋಗ್ಯ ಇಲಾಖೆ ಪರಿಸ್ಥಿತಿ ಅವಲೋಕಿಸಿದೆ. ಸೋಂಕು ಪತ್ತೆಯಾದ ಪ್ರದೇಶದಿಂದ ಮಾದರಿಗಳನ್ನು ತೆಗೆದುಕೊಂಡು ಪರೀಕ್ಷೆ ನಡೆಸಲಾಗಿದ್ದು, ರಕ್ಷಣೆಗೆ ಅಗತ್ಯ ಕ್ರಮವನ್ನು ತೀವ್ರಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Leave a Comment