ತಿರುವನಂತಪುರಂ:ಕೇರಳದಲ್ಲಿ ಕೊರೊನಾ ಲಸಿಕೆ ಕೊರತೆಯಾಗಿದ್ದು, ವ್ಯಾಕ್ಸಿನೇಷನ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕಾಗುತ್ತದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ಲಸಿಕೆ ದಾಸ್ತಾನು ಖಾಲಿಯಾಗಿದ್ದು, ಮುಂದಿನ ಕೆಲವು ದಿನಗಳವರೆಗೆ ರಾಜ್ಯದಲ್ಲಿ ವ್ಯಾಕ್ಸಿನೇಷನ್ ಡ್ರೈವ್ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ.
ತಿರುವನಂತಪುರಂ, ಕೊಲ್ಲಂ, ಪಥನಂತಿಟ್ಟ, ಅಲಪ್ಪುಝ ಜಿಲ್ಲೆಗಳಲ್ಲಿ ಯಾವುದೇ ಕೋವಿಶೀಲ್ಡ್ ಲಸಿಕೆ ಇಲ್ಲ. ಜುಲೈ 29 ರ ಮೊದಲು ಹೊಸದಾಗಿ ಲಸಿಕೆಗಳು ರಾಜ್ಯವನ್ನು
ತಲುಪುವ ನಿರೀಕ್ಷೆಯಿಲ್ಲ ಎಂದು ಸ್ಥಳಿಯ ಮಾದ್ಯಮ ವರದಿ ಮಾಡಿದೆ.
ಕೇರಳದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 1.09 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಇದರಲ್ಲಿ 11,586 ಜನರು ಕೊರೊನಾ ಪಾಸಿಟಿವ್ ಆಗಿದ್ದಾರೆ. ಪರೀಕ್ಷಾ ಪಾಸಿಟಿವ್ ಪ್ರಮಾಣವು 10.59% ರಷ್ಟಿದೆ ಎಂದು ವೀಣಾ ಜಾರ್ಜ್ ಹೇಳಿದ್ದಾರೆ.















