Coastal Bulletin

ಸುಬ್ರಹ್ಮಣ್ಯ :ಕಳೆದ 4ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು ದೇವಸ್ಥಾನದ‌ ಸ್ಥಾನ ಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.

ಕಳೆದ ನಾಲ್ಕು ದಿನಗಳಿಂದ ಈ ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಈ ವರ್ಷದಲ್ಲಿ ಮೊದಲ ಸಲ ಈ ಸ್ನಾನ ಘಟ್ಟ ಮುಳುಗಡೆಯಾಗಿದೆ.ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ನದಿ ನೀರಿನ ಮಟ್ಟ ಏರಿದೆ. ಸುಬ್ರಹ್ಮಣ್ಯ ಅಲ್ಲದೆ ಘಟ್ಟ ಪ್ರದೇಶ ಹಾಗೂ ಕುಮಾರ ಪರ್ವತ ಗಳಲ್ಲಿ ಭಾರಿ ಮಳೆಯಿಂದಾಗಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ.ಮಳೆ ಮುಂದುವರಿಯುವ ಸಾಧ್ಯತೆಗಳಿದ್ದು ಕ್ಷೇತ್ರಕ್ಕೆ ಆಗಮಿಸಿದ ಭಕ್ತಾದಿಗಳು ನದಿಯ ಸ್ನಾನಕ್ಕೆ ತೆರಳದಂತೆ

ಎಚ್ಚರ ವಹಿಸಲಾಗಿದೆ. ಕುಮಾರಧಾರ ನದಿಯ ದಡದಲ್ಲಿ ತೀರ್ಥಸ್ನಾನ ನೆರವೇರಿಸುತ್ತಿದ್ಧಾರೆ. ನದಿಯ ದಡದಲ್ಲೇ ತೀರ್ಥಸ್ನಾನ ನೆರವೇರಿಸಲು ಭಕ್ತಾದಿಗಳಿಗೆ ಅವಕಾಶ ನೀಡಲಾಗಿದೆ. ಸ್ನಾನಘಟ್ಟ ಬಳಿ ಕಿಂಡಿ ಅಣೆಕಟ್ಟು ಕೂಡ ಸಂಪೂರ್ಣ ಮುಳುಗಡೆಯಾಗಿದೆ.

ಆದಿ ಸುಬ್ರಹ್ಮಣ್ಯದ ದರ್ಪಣ ತೀರ್ಥ ನದಿಯಲ್ಲೂ ನೀರಿನ ಮಟ್ಟ ಹೆಚ್ಚಳ ಗೊಂಡಿದ್ದು ಸುಬ್ರಹ್ಮಣ್ಯ ಠಾಣಾ ಪೊಲೀಸರು, ಗೃಹ ರಕ್ಷಕ ದಳದ ಸಿಬ್ಬಂದಿಗಳು ಕಾವಲು ವ್ಯವಸ್ಥೆಯ ಕರ್ತವ್ಯ ನಿರ್ವಹಿಸುತ್ತಿದ್ದಾರೆ.


Leave a Comment