Coastal Bulletin

ಮಂಗಳೂರು:ಜಿಲ್ಲೆಯಲ್ಲಿ ಕೋವಿಡ್-19 ಆನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದು, ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹೆಚ್ಚಿನ ಜಾಗರೂಕತೆಯನ್ನು ಅನುಸರಿಸುವ ಅನಿವಾರ್ಯವಿದ್ದು, ಮುಂಬರುವ ದಿನಗಳಲ್ಲಿ ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಪ್ರಸ್ತುತ ರಾಜ್ಯ ಸರ್ಕಾರವು ಕೇರಳ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ, ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕೆಲಸ, ವ್ಯಾಪಾರ ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ದಿನನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚಾರ ಮಾಡುತ್ತಿದ್ದು, ಕಾಸರಗೋಡು - ಮಂಗಳೂರು ನಡುವಿನ ಬಸ್ ಸಂಚಾರಕ್ಕೆ ದಿನಾಂಕ: 19-07-2021 ರಿಂದ ಈ ಕೆಳಕಂಡ ಷರತ್ತಿಗೊಳಪಟ್ಟು ಅನುಮತಿಸಲಾಗಿದೆ.

1) ಕೆ.ಎಸ್.ಆರ್.ಟಿ.ಸಿ. ಮತ್ತು ಖಾಸಗಿ ಬಸ್ ಗಳ ಮೂಲಕ ಪ್ರಯಾಣಿಸುವವರು ಕೋವಿಡ್ ಲಸಿಕ

ಕನಿಷ್ಠ 1(ಒಂದು) ಡೋಸ್ ಪಡೆದಿರುವ ಅಥವಾ 72 ಗಂಟೆಗಳ ಒಳಗೆ ಮಾಡಿಸಿರುವ RT-PCR ಪರೀಕ್ಷೆಯ ನೆಗೆಟಿವ್ ವರದಿಯನ್ನು ಆಯಾ ಬಸ್ ನ ನಿರ್ವಾಹಕರು (Bus Conductor) ಖಚಿತಪಡಿಸಕೊಳ್ಳತಕ್ಕದ್ದು, 2) .ಕೋವಿಡ್‌ ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸುವುದು. (ಮುಖ ಗವಸು, ಸ್ಯಾನಿಟೈಸರ್, ಸಾರ್ವಜನಿಕ ಅಂತರ)ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಕರ್ನಾಟಕ ಸಾಂಕ್ರಮಿಕ ರೋಗಗಳ ಅಧಿನಿಯಮ-2020, ವಿಪತ್ತು ನಿರ್ವಹಣಾ ಕಾಯ್ದೆ, 2005 ರಡಿ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಎಂದು‌ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ‌ಎಚ್ಚರಿಕೆ ನೀಡಿದ್ದಾರೆ.

Leave a Comment