Coastal Bulletin

ಮಂಗಳೂರು:ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ಗಡಿಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರು, ಬೀದರ್, ಬೆಳಗಾವಿ, ವಿಜಯಪುರ, ಕಲಬುರಗಿ, ಚಾಮರಾಜನಗರ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂಜಾರಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ವೀಕೆಂಡ್ ಕರ್ಫ್ಯೂ ಇರುವ  ಜಿಲ್ಲೆಗಳಲ್ಲಿ ಶನಿವಾರ, ಭಾನುವಾರ ಪೂರ್ತಿ ಲಾಕ್ಡೌನ್ ಇರಲಿದ್ದು ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಬೀದಿಬದಿ ವ್ಯಾಪಾರಿಗಳಿಗೆ ಮಧ್ಯಾಹ್ನ 2 ಗಂಟೆಯ ವರೆಗೆ ಅವಕಾಶ ನೀಡಿದೆ. ಅದೇ ರೀತಿ ಈ ಅವಧಿಯಲ್ಲಿ ಮದ್ಯವನ್ನು ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗಿದೆ. ಹೋಟೆಲ್ ಮತ್ತು ರೆಸ್ಟೋರೆಂಟ್

ಗಳಲ್ಲಿ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶವಿದೆ. 

ವಾರಾಂತ್ಯದಲ್ಲಿ, (ಶನಿವಾರ ಮತ್ತು ಭಾನುವಾರ)ದೇವಳಕ್ಕೆ ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಹಾಗೂ ವಸತಿಗೃಹಗಳಲ್ಲಿ ತಂಗುವುದಾಗಲೀ ಅಥವಾ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ.ಎಲ್ಲಾ‌ ರೀತಿಯ ಸೇವೆಗಳನ್ನು ನಿರ್ಬಂಧಿಸಿ, ಅರ್ಚಕರಿಂದ ಸಾಂಪ್ರದಾಯಿಕವಾಗಿ ಪೂಜೆಗೆ ಅನುಮತಿ ನೀಡಲಾಗಿದೆ.

ಈಗಾಗಲೇ ನಿಗದಿಯಾಗಿದ್ದ ಮದುವೆ ಸಮಾರಂಭವನ್ನು ಗರಿಷ್ಠ 50  ಜನರು ಮೀರದಂತೆ ಸ್ಥಳೀಯಾಡಳಿತದ ಪೂರ್ವಾನುಮತಿಯೊಂದಿಗೆ ನಡೆಸಬಹುದು.ಅಂತ್ಯಕ್ರಿಯೆಯಲ್ಲಿ 20 ಜನರು ಭಾಗವಹಿಸಲು ಅವಕಾಶವಿದೆ.

Leave a Comment