Coastal Bulletin

ಮಂಗಳೂರು:ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದರು.

ನೆರೆಯ ಕೇರಳ ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ತೀವ್ರಗೊಂಡ ಕಾರಣ ಕಾಸರಗೋಡಿಗೆ ಸರಕಾರಿ ಹಾಗೂ ಖಾಸಗಿ ಬಸ್‍ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ, ಗಡಿಗಳ ಚೆಕ್ ಪೋಸ್ಟ್‍ಗಳಲ್ಲಿ ತಪಾಸಣೆ ತೀವ್ರಗೊಳಿಸಿದ್ದು, ಅನಗತ್ಯ ಸಂಚಾರವನ್ನು ರದ್ದು ಪಡಿಸಲಾಗಿದೆ, ಆದ ಕಾರಣ ಕೇರಳ ರಾಜ್ಯದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಕಷ್ಟ ಸಾಧ್ಯವಾದ ಕಾರಣ, ಆಗಸ್ಟ್ 4 ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಂದು ನಡೆಸಲು ತೀರ್ಮಾನಿಸಲಾಗಿದೆ. ವಿದ್ಯಾರ್ಥಿಗಳಿಗೆ ಅನುಕೂಲವಿದ್ದಲ್ಲೀ ಮಾತ್ರ ಪರೀಕ್ಷೆಗೆ ಹಾಜರಾಗಬಹುದು. ಇಲ್ಲದಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ನಡೆಸಬೇಕು ಎಂದು ನಿರ್ದೇಶನ ನೀಡಿದರು.

 ಪದವಿ ಪರೀಕ್ಷೆಗಳಲ್ಲಿ ವಹಿಸಲಾದ

ಅಸೈನ್‍ಮೆಂಟ್‍ಗಳನ್ನು ಆನ್‍ಲೈನ್ ಅಥವಾ ಅಂಚೆ ಮೂಲಕ ಸಂಬಂಧಿಸಿದ ಕಾಲೇಜುಗಳೀಗೆ ತಲುಪಿಸಲು ಅವಕಾಶ ನೀಡಬೇಕು, ಪದವಿ ಪರೀಕ್ಷೆಗಳಿಗೆ ಹಾಜರಾಗಲು ಇಚ್ಛಿಸುವ ಕೋವಿಡ್ ಸೋಂಕಿತ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷಾ ಕೊಠಡಿಗಳ ವ್ಯವಸ್ಥೆ ಮಾಡಿಕೊಳ್ಳುವಂತೆ ಅವರು ತಿಳಿಸಿದರು.

ಜಿಲ್ಲೆಯಲ್ಲಿ 29,052 ಪದವಿ ವಿದ್ಯಾರ್ಥಿಗಳು, 5,493 ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಹಾಗೂ ಕೇರಳದ 2000 ವಿದ್ಯಾರ್ಥಿಗಳು (ಪದವಿ ಪರೀಕ್ಷೆ) ಪರೀಕ್ಷೆಗಳಿಗೆ ಹಾಜರಾಗಲಿದ್ದಾರೆ, ಈ ಪರೀಕ್ಷೆ ಎದುರಿಸಲಿರುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಗಳಾಗದಂತೆ ಎಚ್ಚರ ವಹಿಸಬೇಕು, ಯಾವುದೇ ರೀತಿಯ ದಂಡವನ್ನು  ವಿಧಿಸದಂತೆ ಎಲ್ಲಾ ಕಾಲೇಜಿನ ಪ್ರಾಂಶುಪಾಲರಿಗೆ ಅವರು ಸೂಚನೆ ನೀಡಿದರು.

Leave a Comment