ದೆಹಲಿ:ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನದ ಸಾದನೆ ಮಾಡಿದ ಸಾಧಕರಿಗೆ ನೀಡುವ ಪ್ರಶಸ್ತಿಯಾದ ರಾಜೀವ್ ಗಾಂಧಿ ಖೆಲ್ ರತ್ನ ಹೆಸರನ್ನು ಮರುನಾಮಕರಣ ಮಾಡಲಾಗಿದೆ. ರಾಜೀವ್ ಗಾಂಧಿ ಖೆಲ್ ರತ್ನ ಬದಲು ಹಾಕಿ ಕ್ಷೇತ್ರದ ದಂತಕತೆ ಮೇಜರ್ ಧ್ಯಾನ್ ಚಂದ್ ಹೆಸರಲ್ಲಿ ಪ್ರಶಸ್ತಿ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ.
ಖೇಲ್ ರತ್ನ ಪ್ರಶಸ್ತಿಗೆ ಮೇಜರ್ ಧ್ಯಾನ್ ಚಂದ್ ಅವರ ಹೆಸರನ್ನಿಡಿ ಎಂದು ದೇಶದ ನಾನು ಮೂಲೆಗಳಿಂದ ನಾಗರಿಕರು ಮನವಿ ಮಾಡಿಕೊಂಡಿದ್ದರು. ಅವರ ಅಭಿಪ್ರಾಯಗಳಿಗೆ ನಾನು ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅವರ ಭಾವನೆಗಳಿಗೆ ಬೆಲೆಕೊಟ್ಟು
ಖೇಲ್ ರತ್ನ ಪ್ರಶಸ್ತಿಯು ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಸಿಕೊಳ್ಳಲಿದೆ. ಜೈ ಹಿಂದ್ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟರ್ ನಲ್ಲಿ ತಿಳಿಸಿದ್ದಾರೆ.















