ಹೊಸ ವರ್ಷ ಎಲ್ಲರಿಗೂ ಆರೋಗ್ಯ, ಸಮೃದ್ಧಿ ತರಲಿ: ಜನತೆಗೆ ಪ್ರಧಾನಿ ಮೋದಿ ಶುಭ ಹಾರೈಕೆ

Coastal Bulletin
ಹೊಸ ವರ್ಷ ಎಲ್ಲರಿಗೂ ಆರೋಗ್ಯ, ಸಮೃದ್ಧಿ ತರಲಿ: ಜನತೆಗೆ ಪ್ರಧಾನಿ ಮೋದಿ ಶುಭ ಹಾರೈಕೆ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu), ಪ್ರಧಾನಿ ನರೇಂದ್ರ ಮೋದಿ (PM Modi) ಸೇರಿದಂತೆ ಅನೇಕ ಗಣ್ಯರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಎಲ್ಲರಿಗೂ 2026ರ (New Year 2026) ಹೊಸ ವರ್ಷದ ಶುಭಾಶಯಗಳು. ಈ ವರ್ಷವು ಎಲ್ಲರಿಗೂ ಆರೋಗ್ಯ ಮತ್ತು ಸಮೃದ್ಧಿ ತರಲಿ. ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿ ಮತ್ತು ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ನೆರವೇರಲಿ ಎಂದು ಹಾರೈಸುತ್ತೇನೆ. ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಂತೋಷ ನೆಲೆಸಲಿ ಎಂದು ಪ್ರಾರ್ಥಿಸಿದ್ದಾರೆ.

ಹೊಸ ವರ್ಷದ ಈ ಸಂಭ್ರಮದ ಸಂದರ್ಭದಲ್ಲಿ, ದೇಶ ಮತ್ತು ವಿದೇಶಗಳಲ್ಲಿರುವ ಎಲ್ಲಾ ಭಾರತೀಯರಿಗೆ ನಾನು ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪೋಸ್ಟ್‌ ಹಂಚಿಕೊಂಡಿದ್ದಾರೆ.

ಹೊಸ ವರ್ಷ 2026ರ ಸಂದರ್ಭದಲ್ಲಿ ಎಲ್ಲರಿಗೂ ಹಾರ್ದಿಕ ಶುಭಾಶಯಗಳು. ಈ ವರ್ಷವು ಎಲ್ಲರಿಗೂ

ಶಾಂತಿ, ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿ ತರಲಿ ಎಂದು ಹಾರೈಸುತ್ತೇನೆ. ಅಲ್ಲದೆ, ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ನಮ್ಮ ಸಾಮೂಹಿಕ ಸಂಕಲ್ಪ ಈ ವರ್ಷ ಇನ್ನಷ್ಟು ಗಟ್ಟಿಯಾಗಲಿ ಎಂದು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಶುಭಾಶಯ ತಿಳಿಸಿದ್ದಾರೆ.

ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಈ ವರ್ಷವು ಎಲ್ಲರಿಗೂ ಉತ್ತಮ ಆರೋಗ್ಯ, ಸಂತೋಷ, ಶಾಂತಿ ಮತ್ತು ಸಮೃದ್ಧಿ ತರಲಿ. ವಿಕಸಿತ ಭಾರತದ ಹಾದಿಯಲ್ಲಿ ನಾವೆಲ್ಲರೂ ಒಟ್ಟಾಗಿ ಮುನ್ನಡೆಯುತ್ತಿರುವಾಗ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಸೇವೆ, ಉತ್ತಮ ಆಡಳಿತ ಮತ್ತು ಸಮಗ್ರ ಬೆಳವಣಿಗೆಗೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸೋಣ ಎಂದು ಕೇಂದ್ರ ಪ್ರಸಾರ ಖಾತೆ ರಾಜ್ಯ ಸಚಿವ ಎಲ್‌.ಮುರುಗನ್‌ ಶುಭಕೋರಿದ್ದಾರೆ.

Leave a Comment