Coastal Bulletin

ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಸಾರ್ವತ್ರಿಕ ಚುನಾವಣೆಗೆ ಮುನ್ನ ಕೇಂದ್ರ ಸರ್ಕಾರ ಮಂಡಿಸಲಿರುವ ಕೊನೆಯ ಹಾಗೂ ಪೂರ್ಣ ಪ್ರಮಾಣದ ಬಜೆಟ್ ಇದಾಗಿದ್ದು, ಹಲವು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

ಒಂದೆಡೆ ಜಾಗತಿಕ ಆರ್ಥಿಕ ಹಿಂಜರಿತದ ಭೀತಿ. ಮತ್ತೊಂದೆಡೆ ದಿನೇ ದಿನೇ ಹೆಚ್ಚುತ್ತಿರುವ ಅಗತ್ಯ ವಸ್ತುಗಳ ಬೆಲೆಗಳಿಂದ ಜನ ಸಾಮಾನ್ಯರು ತತ್ತರಿಸಿದ್ದಾರೆ. ಹೆಚ್ಚಿದ ಬಡ್ಡಿದರದಿಂದ ತಿಂಗಳ ಇಎಂಐಗಳು ಭಾರವಾಗಿ ಪರಿಣಮಿಸಿದೆ. ಜೊತೆಗೆ ಉದ್ಯೋಗ ಅಭದ್ರತೆಯ ಚಿಂತೆ ಕೂಡ ಶುರುವಾಗಿದೆ. ಇದರ ಮಧ್ಯೆ

ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆಗಳು ಸರಣಿಯಾಗಿ ನಡೆಯಲಿವೆ. ಈ ಹೊತ್ತಲ್ಲಿಯೇ ಮತ್ತೊಮ್ಮೆ ಬಜೆಟ್ ಸಮಯ ಬಂದಿದೆ. ಇಂದು ಬೆಳಗ್ಗೆ 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಹೀಗಾಗಿ ಈ ಬಜೆಟ್ ಮೇಲೆ ನಿರೀಕ್ಷೆಗಳ ಭಾರ ಹೆಚ್ಚಿದೆ.

Leave a Comment